ಸಾಂದರ್ಭಿಕ ಚಿತ್ರ 
ದೇಶ

ಸರ್ಕಾರಿ ಕಚೇರಿ ಕೆಲಸಕ್ಕೆ ಖಾಸಗಿ ವಾಹನ ಬಳಕೆ: ದಂಡ

ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಸರ್ಕಾರಿ ಕಚೇರಿಗಳ ವಿರುದ್ಧ...

ಬೆಂಗಳೂರು: ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಸರ್ಕಾರಿ ಕಚೇರಿಗಳ ವಿರುದ್ಧ ದೂರು ದಾಖಲಿಸಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ದಂಡ ವಿಧಿಸಿದ್ದಾರೆ.

ನಗರದ ವಿವಿಧ ಸರ್ಕಾರಿ ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ ಹೆಸರು ಹಾಕಿಕೊಂಡು ಬಳಸಿಕೊಳ್ಳುತ್ತಿದ್ದವು.

ಸರ್ಕಾರಿ ಕೆಲಸಕ್ಕೆ ಈ ರೀತಿ ಖಾಸಗಿ ವಾಹನಗಳನ್ನು ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದ್ದು, ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಸಾರಿಗೆ ಇಲಾಖೆ ಜಂಟಿ ಆಯುಕ್ತ ನರೇಂದ್ರ ಹೋಲ್ಕರ್ ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 50 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಸಂಬಂಧಪಟ್ಟ ಕಚೇರಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಈ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಹೋಲ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT