ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ 9 ಪ್ರದೇಶಗಳಲ್ಲಿ ಸಿಬಿಐ ದಾಳಿ 
ದೇಶ

ಶಾರದಾ ಹಗರಣ: ಪ.ಬಂಗಾಳದ 9 ಕಡೆ ಸಿಬಿಐ ದಾಳಿ

ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ...

ಕೋಲ್ಕತಾ: ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ 9 ಪ್ರದೇಶಗಳಲ್ಲಿ ಸಿಬಿಐ ಶನಿವಾರ ದಾಳಿ ನಡೆಸಿದೆ.

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿರುವ 5 ಕಂಪನಿಗಳಲ್ಲೊಂದಾದ ವಿನ್ ರಿಯಾಲ್ಕನ್ ಸಂಸ್ಥೆಯ ವಿವಿಧ ಕಚೇರಿಗಳ ಮೇಲೆ ಹಾಗೂ ಬರಾಕ್ಪುರ, ಖರ್ದಾಹ, ಉತ್ತರ ಪರಗಣ ಜಿಲ್ಲೆಯ ಸೊದೆಪುರ ಮತ್ತು ಹಬ್ರ ಸೇರಿದಂತೆ ಒಟ್ಟು 9 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ನವೆಂಬರ್ನಲ್ಲಿ ವಿನ್ ರಿಯಾಲ್ಕನ್ ಕಂಪನಿಯ ವಿರುದ್ದ ವಂಚನೆ, ಕ್ರಿಮಿನಲ್ ಸಂಚು, ಮನಿಸರ್ಕ್ಯುಲೇಶನ್ ಸ್ಕೀಮ್ನ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸಿಬಿಐ ಎಫ್ಐಆರ್ ದಾಖಲುಮಾಡಿಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!