ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ 
ದೇಶ

ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು 10 ಮಕ್ಕಳ ಹಡೆಯಿರಿ: ಶಂಕರಾಚಾರ್ಯ ಸ್ವಾಮೀಜಿ

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕು...

ಅಲಹಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕು ಎಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕು ಎಂದು ಕರೆಕೊಟ್ಟಿದ್ದಾರೆ.

ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ನಾವೇ ಅಲ್ಪಸಂಖ್ಯಾತರಾಗುತ್ತಿದ್ದೇವೆ ಎಂದು ವಿಷಾದಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಹಿಂದೂ ಧರ್ಮವನ್ನು ಉಳಿಸಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 4 ಮಕ್ಕಳ ಬದಲಿಗೆ 10 ಮಕ್ಕಳನ್ನು ಹೆರಬೇಕು. ಇದರಿಂದ ಭಾರತ ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ.  

ಘರ್ ವಾಪಸಿ (ಮರಳಿ ಮನೆಗೆ) ಮಾತನಾಡಿರುವ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ, ಕ್ರಿಶ್ಚಿಯನ್, ಇಸ್ಲಾಂ, ಸಿಖ್ ಸೇರಿದಂತೆ ಎಲ್ಲ ಧರ್ಮಗಳಲ್ಲೂ ಮತಾಂತರಗೊಂಡವರು ತಮ್ಮ ತಮ್ಮ ಧರ್ಮಕ್ಕೆ ಹಿಂತಿರುಗುತ್ತಿದ್ದಾರೆ. ಅದರಲ್ಲಿ, ಹಿಂದೂ ಧರ್ಮದಿಂದ ಮತಾಂತರಗೊಂಡವರು ಪುನಃ ಅದೇ ಧರ್ಮಕ್ಕೆ ಬರುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು. 

ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಪ್ರತಿಯೊಬ್ಬ ಹಿಂದೂ ಮಹಿಳೆ ನಾಲ್ಕು ಮಕ್ಕಳನ್ನು ಹೆರಬೇಕೆಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ತದನಂತರ ಶಾಮಲ್ ಗೋಸ್ವಾಮಿ 4 ಮಕ್ಕಳ ಬದಲಿಗೆ 5 ಮಕ್ಕಳನ್ನು ಹೆರುವಂತೆ  ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT