ಭೂಗತ ಪಾತಕಿ ದಾವೂದ್ ಇಬ್ರಾಹಿಂ 
ದೇಶ

ದಾವೂದ್‌ನನ್ನು ಕರಾಚಿಗೆ ಕರೆಸಿಕೊಂಡ ಐಎಸ್‌ಐ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಗೆ ಬಂದಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ಕೇಂದ್ರ ಸರ್ಕಾರ...

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಗೆ ಬಂದಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿವೆ ಎಂದು ಮೂಲಗಳು ತಿಳಿಸಿವೆ.

ಭೂಗತ ಪಾತಕಿ ಹಾಗೂ 1993ರ ಮುಂಬೈ ಸರಣಿ ಸ್ಫೋಟದ ರುವಾರಿ ದಾವೂದ್ ಇಬ್ರಾಹಿಂ ಪಾಕಿಸ್ತಾನ-ಆಫ್ಘಾನಿಸ್ಥಾನದ ಗಡಿಭಾಗದಲ್ಲಿ ಅವಿತಿದ್ದನು. ಆತನನ್ನು ಪಾಕಿಸ್ತಾನದ ಐಎಸ್‌ಐ ಕರೆಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದೆ.

ಕಳೆದ 20 ವರ್ಷಗಳಿಂದ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದ ದಾವೂದ್ ಇಬ್ರಾಹಿಂಗೆ ಐಎಸ್‌ಐ ರಕ್ಷಣೆ ನೀಡುತ್ತಿದೆ ಎಂಬ ಮಾತು ಕೇಳಿ ಬಂದಿತ್ತು.

ಭಾರತದಲ್ಲಿ ಹುಟ್ಟಿದ ದಾವೂದ್ ಇಬ್ರಾಹಿಂ, ಮುಂಬೈ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಲ್ಲದೆ ಮಾದಕ ವಸ್ತು ಸಾಗಾಟ ಈತನ ಪ್ರಮುಖ ಕಸುಬಾಗಿದೆ. ಈತನನ್ನು ಕಳೆದ ಹಲವು ವರ್ಷಗಳಿಂದ ಒಪ್ಪಿಸುವಂತೆ ಪಾಕಿಸ್ತಾನಕ್ಕೆ ಭಾರತ ಮನವಿ ಮಾಡಿದ್ದು, ಆತ ನಮ್ಮದೇಶದಲ್ಲಿ ಇಲ್ಲ ಎಂದು ಪಾಕಿಸ್ತಾನ ವಾದಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಹೊಸ ವಿತ್ತೀಯ ವರ್ಷದಲ್ಲಿ ಆಗಿರುವ ಬದಲಾವಣೆಗಳೇನು ಗೊತ್ತಾ? (ಹಣಕ್ಲಾಸು)

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SCROLL FOR NEXT