ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವ ಕೃಷ್ಣ ತೀರ್ಥ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ನಿರ್ಣಾಯಕ ದೆಹಲಿ ವಿಧಾನಸಭೆ ಚುನಾವಣೆಯ ಆರಂಭದಲ್ಲೇ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾದಂತಾಗಿದೆ.
ತಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವುದನ್ನು ಖಚಿತ ಪಡಿಸಿರುವ ಕೃಷ್ಣ ತೀರ್ಥ ಅವರು, ಒಬ್ಬ ಜನಪ್ರತಿನಿಧಿಯಾಗಿ ನಾನು ಆ ಪಕ್ಷ ಸೇರ್ಪಡೆಯಾಗಿದ್ದೇನೆ. ಪಕ್ಷದಲ್ಲಿ ನನ್ನ ಜವಾಬ್ದಾರಿ ಏನು ಎಂಬುದನ್ನು ಬಿಜೆಪಿ ನಾಯಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ತೀರ್ಥ ಅವರು ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದಾಗಿ ಸ್ಪಷ್ಟಪಡಿಸಿರು. ತೀರ್ಥ ಅವರ ಸೇರ್ಪಡೆಯಿಂದಾಗಿ ಬಿಜೆಪಿ ದಲಿತ ಮತಗಳು ಸೆಳೆಯುವ ಸಾಧ್ಯತೆ ಇದೆ.
ಈ ಹಿಂದೆ ಈಶಾನ್ಯ ಲೋಕಸಭಾ ಕ್ಷೇತ್ರದ ಸಂಸದೆಯಾಗಿದ್ದ ತೀರ್ಥ ಅವರು ಈಗ ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.