ಹೊಗೇನಕಲ್ ಬಳಿ ಕಂದಕಕ್ಕೆ ಉರುಳಿದ ಬಸ್ 
ದೇಶ

ಹೊಗೇನಕಲ್ ಬಳಿ ಕಂದಕಕ್ಕೆ ಬಸ್ ಉರುಳಿ 5 ಸಾವು

ಹೊಗೇನಕಲ್ ಬಳಿ ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿದ್ದು, ಕನಿಷ್ಟ 5 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಗೇನಕಲ್ ಬಳಿ ಈ ಅಫಘಾತ ಸಂಭವಿಸಿದ್ದು,..

ಧರ್ಮಪುರಿ: ಹೊಗೇನಕಲ್ ಬಳಿ ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿದ್ದು, ಕನಿಷ್ಟ 5 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಗೇನಕಲ್ ಬಳಿ ಈ ಅಫಘಾತ ಸಂಭವಿಸಿದ್ದು, ಬೆಟ್ಟದಿಂದ ಬಸ್ 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಈ ಪೈಕಿ 5 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?