ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ 
ದೇಶ

ಮಾಜಿ ಪ್ರಧಾನಿಗೆ ಮಸಿ ವಿಚಾರಣೆ

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಹಿಂಡಾಲ್ಕೋ ಕಂಪನಿಗೆ ಅಕ್ರಮವಾಗಿ ಕಲ್ಲಿದ್ದಲು ಗಣಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಂಗ್ ಅವರನ್ನು ಈ ವಿಚಾರಣೆಗೊಳಪಡಿಸಲಾಗಿದೆ...

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಹಿಂಡಾಲ್ಕೋ ಕಂಪನಿಗೆ ಅಕ್ರಮವಾಗಿ ಕಲ್ಲಿದ್ದಲು ಗಣಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಂಗ್ ಅವರನ್ನು ಈ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ.

ಎರಡು ದಿನ ಹಿಂದೆಯೇ ಸಿಂಗ್‌ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳ ತಂಡ ಮಾಜಿ ಪ್ರಧಾನಿ ಅವರನ್ನು ಪ್ರಶ್ನಿಸಿದೆ. ಹಿಂಡಾಲ್ಕೋ ಪ್ರಕರಣಕ್ಕೆಸಂಬಂಧಿಸಿ ಜ.27ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಡಿ.16ರಂದು ವಿಶೇಷ ನ್ಯಾಯಾಲಯ ಸಿಬಿಐಗೆ ಸೂಚಿಸಿತ್ತು. ಅದರಂತೆ ಈ ವಿಚಾರಣೆ ನಡೆದಿದೆ. ಆದರೆ, ಸಿಂಗ್ ವಿಚಾರಣೆ ಕುರಿತು ಯಾವುದೇ ಮಾಹಿತಿ ನೀಡಲು ಸಿಬಿಐ ಅಧಿಕಾರಿಗಳು ನಿರಾಕರಿಸಿದ್ದಾರೆ.

ಸಿಬಿಐ ವಕ್ತಾರ ಕಾಂಚನ್ ಪ್ರಸಾದ್‌ರನ್ನು ಈ ವಿಚಾರವಾಗಿ ಪ್ರಶ್ನಿಸಿದಾಗ, ಈ ವರದಿಯನ್ನು ಖಚಿತಪಡಿಸಲೂ ಇಲ್ಲ, ನಿರಾಕರಿಸಲೂ ಇಲ್ಲ. ಆದರೆ, ಸಿಂಗ್ ಅವರ ಆಪ್ತರೊಬ್ಬರು ಈ ರೀತಿ ವಿಚಾರಣೆ ನಡೆದೇ ಇಲ್ಲ ಎಂದಿದ್ದಾರೆ. ಒಂದು ವೇಳೆ ಈ ವಿಚಾರಣೆ ನಡೆದಿದ್ದರೆ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆಗೊಳಪಟ್ಟ ಮೊದಲ ಮಾಜಿ ಪ್ರಧಾನಿ ಸಿಂಗ್ ಆಗಲಿದ್ದಾರೆ.

ಯಾವ ಪ್ರಕರಣ?
ಉದ್ಯಮಿ ಕುಮಾರ ಮಂಗಲಂ ಬಿರ್ಲಾಗೆ ಸೇರಿದ ಹಿಂಡಾಲ್ಕೋ ಕಂಪನಿಗೆ ವಿತರಿಸಲಾಗಿದ್ದ ತಲಬಿರಾ-2 ಬ್ಲಾಕ್‌ಗೆ ಸಂಬಂಧಿಸಿ ಸಿಂಗ್ ಅವರನ್ನು ವಿಚಾರಣೆ ನಡೆಸಲಾಗಿದೆ.

ಈ ಬ್ಲಾಕ್ ಹಂಚಿಕೆ ವೇಳೆ ಕಲ್ಲಿದ್ದಲು ಖಾತೆಯನ್ನು ಪ್ರಧಾನಿಯಾಗಿದ್ದ ಸಿಂಗ್ ಅವರು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಒಡಿಶಾದ ತಲಬಿರಾ-2 ಬ್ಲಾಕ್ ಹಂಚಿಕೆ ಮಾಡುವಂತೆ ಕೋರಿ  ಉದ್ಯಮಿ ಕುಮಾರ ಮಂಗಲಂ ಬಿರ್ಲಾ ಅವರು 2005ರ ಮೇ7 ಮತ್ತು ಜೂ.17ರಂದು ಪ್ರಧಾನಿಗೆ ಪತ್ರ ಬರೆದಿದ್ದರು.

ಈ ವೇಳೆ ಕಲ್ಲಿದ್ದಲು ಸಚಿವಾಲಯ ಹಾಗೂ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಬೆಳವಣಿಗೆಗಳ ಕುರಿತಾಗಿ ಸಿಬಿಐ ಅಧಿಕಾರಿಗಳು ಸಿಂಗ್‌ರನ್ನು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಗ ಕಲ್ಲಿದ್ದಲು ಸಚಿವರಾಗಿದ್ದ ಮನಮೋಹನ ಸಿಂಗ್ ಅವರ ವಿಚಾರಣೆ ನಡೆಸದೆ ಹಿಂಡಾಲ್ಕೋ ಪ್ರಕರಣದ ತನಿಖೆಯ ಸಮಾಪ್ತಿ ವರದಿಯನ್ನು ಒಪ್ಪಿಕೊಳ್ಳಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭರತ್ ಪರಾಶರ್ ನಿರಾಕರಿಸಿದ್ದರು. ಜತೆಗೆ, ನಿಮಗೆ ಆಗ ಕಲ್ಲಿದ್ದಲು ಖಾತೆಯನ್ನು ಇಟ್ಟುಕೊಂಡಿದ್ದ ಮನಮೋಹನ ಸಿಂಗ್ ಅವರ ವಿಚಾರಣೆ ನಡೆಸಬೇಕೆಂದು ಅನಿಸಲಿಲ್ಲವೇ ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT