ನವದೆಹಲಿ: ಕೇಂದ್ರದ ಮಾಜಿ ಸಚಿವ, ಜನಪ್ರಿಯ ನ್ಯಾಯವಾದಿ ಕಪಿಲ್ ಸಿಬಲ್ ಕಾಂಗ್ರೆಸ್ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಶಾರದಾ ಚಿಟ್‌ಫಂಡ್ ಹಗರಣದಲ್ಲಿ ಸಿಬಿಐ ಅನ್ನು ದುರುಪಯೋಗ ಮಾಡುತ್ತಿದೆ ಎಂದು ಪಶ್ಟಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅದರ ಪರವಾಗಿ ವಾದ ಮಂಡಿಸುತ್ತಿರುವುದು ಕಪಿಲ್ ಸಿಬಲ್. ಇದು ಪಶ್ಟಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ನಾಯಕರ ಕೋಪಕ್ಕೆ ಕಾರಣ. ಈ ಬಗ್ಗೆ ರಾಜ್ಯ ಘಟಕ ನಾಯಕರು ವರಿಷ್ಠರಿಗೆ ದೂರು ನೀಡಿದ್ದರು.
ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಟಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿ ಸಿ.ಪಿ ಜೋಶಿ ರಾಜ್ಯ ಮುಖಂಡರ ನಿಲುವಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.