ದೇಶ

ಬಿಹಾರದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ, ಇಬ್ಬರು ಸಾವು

Lingaraj Badiger

ಪಾಟ್ನಾ: ಬಿಹಾರದಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ ಮತ್ತು ಓರ್ವ ಪೊಲೀಸ್ ಪೇದೆ ಸೇರಿದಂತೆ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಹಾರದ ಬೋಜಪುರಿ ಜಿಲ್ಲೆಯ ಆರಾ ನಗರದ ಸಿವಿಲ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾಳೆ.

ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಮಹಿಳೆಯೊಬ್ಬಳು ತನ್ನ ಬ್ಯಾಗ್‌ನಲ್ಲಿ ಬಾಂಬ್ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದ್ದು, ಆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಸ್ಫೋಟದ ಕುರಿತು ಬಿಹಾರ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಫೋಟದ ಮಾದರಿ ಇನ್ನಷ್ಟೆ ಪತ್ತೆಯಾಗಬೇಕಿದೆ.

SCROLL FOR NEXT