ಎಂ.ಎಸ್ ನಾರಾಯಣ 
ದೇಶ

ಟಾಲಿವುಡ್ ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ಹಾಸ್ಯ ನಟ ಎಂ.ಎಸ್ ನಾರಾಯಣ ಇಂದು ವಿಧಿವಶ...

ಹೈದ್ರಾಬಾದ್: ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್‌ನ ಹಾಸ್ಯ ನಟ ಎಂ.ಎಸ್ ನಾರಾಯಣ ಇಂದು ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಎಂ.ಎಸ್ ನಾರಾಯಣ ಅವರು ಕಳೆದ ಒಂದು ವಾರದಿಂದ ಮಧಪುರ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಕ್ರಾಂತಿ ಹಬ್ಬ ಆಚರಿಸಲೆಂದು ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿರುವ ತಮ್ಮ ಸ್ವಗ್ರಾಮ ನಿಡಮರ್ರುಗೆ ತೆರಳಿದ್ದರು. ಈ ವೇಳೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. 63 ವರ್ಷದ ನಾರಾಯಣ ಅವರು ಹೃದಯ ಸಂಬಂಧಿ ರೋಗ ಹಾಗೂ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

1951 ಏಪ್ರಿಲ್ 16ರಂದು ಜನಿಸಿದ ನಾರಾಯಣ ಅವರ ಮೂಲ ಹೆಸರು ಸೂರ್ಯನಾರಾಯಣ. ಯಮಧರ್ಮರಾಜು ಚಿತ್ರದ ಮೂಲಕ ತೆಲಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ಹಾಸ್ಯ ಪಾತ್ರದಲ್ಲಿ ಹೆಚ್ಚು ಖ್ಯಾತಿ ಪಡೆದರು. 700ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಾರಾಯಣ ಅವರು 8 ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. ಬಹುಭಾಷಾ ನಟರಾಗಿದ್ದ ನಾರಾಯಣ ಅವರಿಗೆ 5 ಬಾರಿ ಪ್ರತಿಷ್ಠಿತ ನಂದಿ ಪ್ರಶಸ್ತಿ ಗೌರವ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ