ಉಗ್ರರ ಸಂಭಾವ್ಯ ಪ್ರವೇಶ ಮಾರ್ಗ (ಸಾಂದರ್ಭಿಕ ಚಿತ್ರ) 
ದೇಶ

ಶ್ರೀಲಂಕಾ ಮಾರ್ಗವಾಗಿ ನುಸುಳಲು ಉಗ್ರರ ಸಂಚು..!

ಗಣರಾಜ್ಯೋತ್ಸವ ಆಚರಣೆ ವೇಳೆ ದುಷ್ಕೃತ್ಯವನ್ನು ನಡೆಸಲು ಹವಣಿಸುತ್ತಿರುವ ಉಗ್ರರು ಶ್ರೀಲಂಕಾ ಮಾರ್ಗವಾಗಿ..

ನವದೆಹಲಿ: ಗಣರಾಜ್ಯೋತ್ಸವ ಆಚರಣೆ ವೇಳೆ ದುಷ್ಕೃತ್ಯವನ್ನು ನಡೆಸಲು ಹವಣಿಸುತ್ತಿರುವ ಉಗ್ರರು ಶ್ರೀಲಂಕಾ ಮಾರ್ಗವಾಗಿ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇದೇ ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಆಗಮಿಸಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕೇಂದ್ರ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.

ಕೇವಲ ದೆಹಲಿ ಮಾತ್ರವಲ್ಲದೆ ಒಬಾಮ ಅವರು ಭೇಟಿ ನೀಡಲಿರುವ ಎಲ್ಲ ಪ್ರದೇಶಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಹೆಜ್ಜೆ-ಹೆಜ್ಜೆಗೂ ಪೊಲೀಸರ ಭದ್ರ ಕೋಟೆಯನ್ನೇ ನಿರ್ಮಿಸಲಾಗಿದೆ. ಹೀಗಾಗಿ ಉಗ್ರರು ದೆಹಲಿಯನ್ನು ಬಿಟ್ಟು ಬೇರೆ ಪ್ರದೇಶಗಳಲ್ಲಿ ತಮ್ಮ ದುಷ್ಕೃತ್ಯ ನಡೆಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಗಣರಾಜ್ಯೋತ್ಸವ ದಿನದಂದು ಉಗ್ರರು ದೇಶದ ವಿವಿಧ ಭಾಗಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಿದ್ದು, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಬಿಹಾರ ಮತ್ತು ಮುಂಬೈನಲ್ಲಿ ದುಷ್ಕೃತ್ಯ ನಡೆಸುವ ಕುರಿತು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಮುಖವಾಗಿ ಉಗ್ರರು ಶ್ರೀಲಂಕಾ ಮಾರ್ಗವಾಗಿ ಭಾರತ ಪ್ರವೇಶಿಸುವ ಸಾಧ್ಯತೆ ಇದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿಯೂ ಎಚ್ಚರ ವಹಿಸುವುದು ಅಗತ್ಯ ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಬರಾಕ್ ಒಬಾಮ ಅವರ ದೆಹಲಿ ಭೇಟಿ ಹಿನ್ನಲೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭದ್ರತೆ ಒದಗಿಸಲಾಗಿದ್ದು, ಒಬಾಮ ಅವರಿಗೆ 7 ಹಂತದ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೇವಲ ದೆಹಲಿ ಮಾತ್ರವಲ್ಲದೆ ಆಗ್ರಾ ಮತ್ತು ತಾಜ್ ಮಹಲ್‌ನಲ್ಲಿಯೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ಸಮುದ್ರ ಮಾರ್ಗವಾಗಿ ಉಗ್ರರು ದಾಳಿ ಮಾಡುವ ಕುರಿತು ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಮುಂಬೈನಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಗೇಟ್ ವೇ ಆಫ್ ಇಂಡಿಯಾ, ತಾಜ್ ಹೊಟೆಲ್, ಸಿದ್ಧಿವಿನಾಯಕ ದೇವಸ್ಥಾನದಂತಹ ಪ್ರಮುಖ ಪ್ರವಾಸಿ ತಾಣಗಳಲ್ಲಿನ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ಇದಲ್ಲದೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ರವಾನಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ