ಮತ್ತೆ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ
ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು. ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ...
ಜಮ್ಮು: ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು. ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಬರುವುದಕ್ಕೂ ಕೆಲವು ಗಂಟೆಗಳ ಹಿಂದಷ್ಟೇ ಗುಂಡಿನ ಚಕಮಕಿ ನಡೆಸಿ ಗಡಿಯಿಂದ ಒಳನುಸುಳಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಜೊಗ್ವಾನ್ನ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪಡೆಗಳು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಯೋಧರು ಇಂದು ಬೆಳಗ್ಗೆ ಮತ್ತೆ ಗುಂಡಿನ ಮಳೆ ಪ್ರಾರಂಭಿಸಿದ್ದಾರೆ. ಬೆಳಿಗ್ಗೆ 1 ಗಂಟೆಯಿಂದ ಗುಂಡಿನ ದಾಳಿ ನಡೆಸಿದ್ದರು. ಒಬಾಮ ಬರುವುದಕ್ಕೂ ಕೆಲವು ಗಂಟೆಗಳ ಹಿಂದಷ್ಟೇ ಮತ್ತೆ ಸಣ್ಣ ಮಟ್ಟದಲ್ಲಿ ಗುಂಡಿನ ದಾಳಿ ನಡೆಸಿ ಒಳನುಸುಳಲು ಯತ್ನಿಸಿದ್ದಾರೆ.
ಬೆಳಿಗ್ಗೆ 1 ಗಂಟೆ ಸುಮಾರಿಗೆ ಪಾಕ್ ಸೇನಾ ಪಡೆಯಿಂದ ಗುಂಡಿನ ದಾಳಿ ಪ್ರಾರಂಭವಾಯಿತು. ತದನಂತರ ಭಾರತೀಯ ಸೇನಾ ಪಡೆ ಪಾಕ್ ದಾಳಿಗೆ ದಿಟ್ಟ ಉತ್ತರ ನೀಡಿತ್ತು. ಘಟನೆ ವೇಳೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಹಾಗೂ ಯಾರೊಬ್ಬರಿಗು ಗಾಯಗಳಾಗಿಲ್ಲ ಎಂದು ಸೇನಾ ಮುಖ್ಯಸ್ಥರೊಬ್ಬರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.