ನವದೆಹಲಿ: ದೆಹಲಿಯ ಪ್ರತಿಷ್ಠಿತ ಗ್ರೇಟರ್ ಕೈಲಾಶ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆನಿಂದ ಕಣಕ್ಕಿಳಿದಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಚೊಚ್ಚಲ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನೀನು ರಾಜಕೀಯಕ್ಕೆ ಧುಮುಕಿದ್ದಿ. ಮುಂದಿನ ಹಾದಿ ಬಲು ಕಷ್ಟಕರವಾಗಿದೆ. ಕಠಿಣ ಪರಿಶ್ರಮ ಮತ್ತು ತಾಳ್ಮೆಯಿದ್ದರೆ ಮಾತ್ರ ಯಶಸ್ಸು ಸಿಗಲಿದೆ. ಎಂದು ನನ್ನ ತಂದೆ ಹೇಳಿದ್ದರು.
ನಾನು ಅವರ ಮೌಲ್ಯಯುತ ಸಲಹೆಯಂತೆ ಕಾರ್ಯನಿರ್ವಹಿಸುತ್ತಿದ್ದೇನೆ ಎಂದಿದ್ದಾರೆ ಶರ್ಮಿಷ್ಠಾ. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಆಮ್ ಆದ್ಮಿ ಪಕ್ಷ ಬಾಚಿಕೊಂಡಿತ್ತು. ಬಿಜೆಪಿ ಅಭ್ಯರ್ಥಿ ಎರಡನೇ ಸ್ಥಾನ ಪಡೆದಿದ್ದಾರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.