ವೈಕುಂಠ ವಿದ್ಯುತ್ ಚಿತಾಗಾರದಲ್ಲಿ ಆರ್‌ಕೆ ಲಕ್ಷ್ಮಣ್ ಅಂತ್ಯಸಂಸ್ಕಾರ (ಸಂಗ್ರಹ ಚಿತ್ರ) 
ದೇಶ

'ಕಾಮನ್ ಮ್ಯಾನ್‌'ಗೆ ಅಂತಿಮ ವಿದಾಯ

ಸೋಮವಾರ ನಿಧನರಾದ ಖ್ಯಾತ ವ್ಯಂಗ್ಯಚಿತ್ರಕಾರ ಆರ್‌ಕೆ ಲಕ್ಷ್ಮಣ್ ಅವರ ಅಂತಿಮ ವಿಧಿವಿಧಾನ ಪುಣೆಯಲ್ಲಿ ನೆರವೇರಿತು.

ಪುಣೆ: ಸೋಮವಾರ ನಿಧನರಾದ ಖ್ಯಾತ ವ್ಯಂಗ್ಯಚಿತ್ರಕಾರ ಆರ್‌ಕೆ ಲಕ್ಷ್ಮಣ್ ಅವರ ಅಂತಿಮ ವಿಧಿವಿಧಾನ ಪುಣೆಯಲ್ಲಿ ನೆರವೇರಿತು.

ಪುಣೆಯ ವೈಕುಂಠ ವಿದ್ಯುತ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆರ್‌ಕೆ ಲಕ್ಷ್ಮಣ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. ಈ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಅವರ ಸಂಪುಟದ ಕೆಲ ಸಚಿವರು, ಶಿವಸೇನೆ ಮುಖಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತ್ ಮುಖ್ಯಸ್ಥ ರಾಜ್‌ಠಾಕ್ರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಆರ್‌ಕೆ ಲಕ್ಷ್ಮಣ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೈಸೂರು ಮೂಲದವರಾದ ಖ್ಯಾತ ವ್ಯಂಗ್ಯಚಿತ್ರಕಾರ ಆರ್‌ಕೆ ಲಕ್ಷ್ಮಣ್ ಅವರು ಕಳೆದ ಕೆಲ ವರ್ಷಗಳಿಂದ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಆರ್‌ಕೆ ಲಕ್ಷ್ಮಣ ಅವರ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ದೇಶದ ವಿವಿಧ ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT