ಟಿಎಂಸಿ ನಾಯಕ ಮುಕುಲ್ ರಾಯ್ 
ದೇಶ

ಶಾರದಾ ಚಿಟ್‌ಫಂಡ್: ಮುಕುಲ್ ರಾಯ್ ವಿಚಾರಣೆ

ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣ ಹಲವು ತಿರುವುಗಳನ್ನು ಪಡೆಯುತ್ತಿದ್ದು, ಪ್ರಕರಣ...

ನವದೆಹಲಿ: ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣ ಹಲವು ತಿರುವುಗಳನ್ನು ಪಡೆಯುತ್ತಿದ್ದು, ಪ್ರಕರಣ ಕುರಿತಂತೆ ಸಿಬಿಐ ಶುಕ್ರವಾರ ಟಿಎಂಸಿ ನಾಯಕ ಮುಕುಲ್ ರಾಯ್ ಅವರನ್ನು ವಿಚಾರಣೆಗೊಳಪಡಿಸಿದೆ.

ಸಿಬಿಐ ವಿಚಾರಣೆ ಕುರಿತಂತೆ ಸ್ಪಷ್ಟನೆ ನೀಡಿರುವ ಮುಕುಲ್ ರಾಯ್ ಅವರು, ವಿಚಾರಣೆಗೂ ಮುನ್ನ ಸಿಬಿಐ ಅಧಿಕಾರಿಗಳು ತನಿಖೆಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಹಾಗಾಗಿಯೇ ಪ್ರಕರಣದ ತನಿಖೆಗೆ ಸಹಾಯ ಮಾಡಲು ವಿಚಾರಣೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ, ನಾನು ಯಾವ ತಪ್ಪು ಮಾಡಿಲ್ಲ. ಇದೆಲ್ಲ ವಿರೋಧ ಪಕ್ಷಗಳ ಪಿತೂರಿ ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮುಕುಲ್ ರಾಯ್ ಹೇಳಿದರು.

ಶಾರದಾ ಚಿಟ್‌ಫಂಡ್ ಹಗರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಂಪನಿಯ ಮೇಲಧಿಕಾರಿ ಸುದೀಪ್ತ ಸೇನ್ ಅವರ ದೂರವಾಣಿ ಕರೆಗಳ ದಾಖಲೆಗಳನ್ನು ಪರಿಶೀಲಿಸುವ ವೇಳೆ ಸುದೀಪ್ತ ಸೇನ್ ಹಲವು ಬಾರಿ ಟಿಎಂಸಿ ನಾಯಕ ಮುಕುಲ್ ರಾಯ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮುಕುಲ್ ರಾಯ್ ಅವರಿಗೆ ಸಿಬಿಐ ಅಧಿಕಾರಿಗಳು ಮೇಲ್ ಮೂಲಕ ಜ.12 ರಂದು ಸಮನ್ಸ್ ಜಾರಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!