ಸರಣಿ ಅಪಘಾತ 
ದೇಶ

ಭೀಕರ ಸರಣಿ ಅಪಘಾತ: ಐವರ ದುರ್ಮರಣ

ಹೈದರಾಬಾದ್: ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಪರಿಣಾಮ ಐವರು ಮೃತಪಟ್ಟಿದ್ದಾರೆ. ಶಾಲಾ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಒಂದು ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಗನ್ ಮೋಹನ್ ರೆಡ್ಡಿ ರ್ಯಾಲಿಗೆ ಜನರನ್ನು ಶಾಲಾ ಬಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ. ಬ್ರೇಕ್ ಫೇಲ್ ಆಗಿದ್ದ ಬಸ್ ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಎದುರಿಗೆ ಬಂದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ರಾಜಮಂಡ್ರಿಯ ಮೋರಂಪುಡಿ ಸರ್ಕಲ್ ಬಳಿ ಮಧ್ಯಾಹ್ನ 1.30 ಗಂಟೆಗೆ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಬಸ್ ಮೊದಲು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಿಂದಕ್ಕೆ ಚಲಿಸಲಾರಂಭಿಸಿತು. ನಂತರ ಎದುರಿಗೆ ಹಾದುಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಮತ್ತೊಂದು ಪವಾಡ; 10 ದಿನಗಳ ಬಳಿಕ ಇಬ್ಬರ ಜೀವಂತ ರಕ್ಷಣೆ! ಸಾವಿನ ಸಂಖ್ಯೆ 1,344 ಕ್ಕೆ ಏರಿಕೆ

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ; ಯಾರು ಈ ರಿತೇಶ್?

RCB ಹೆಸರು ಬದಲಾಗುತ್ತಾ? ವದಂತಿಗಳಿಗೆ ತೆರೆ ಎಳೆದ ಫ್ರಾಂಚೈಸಿ ಅಧ್ಯಕ್ಷ ಆರ್ಯಮನ್ ಬಿರ್ಲಾ!

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ SY Quraishi