ನವದೆಹಲಿ: ಭಾರತ ಹಾಗೂ ಚೀನಾ ನಡುವಿನ ಉತ್ತಮ ಬಾಂಧವ್ಯ ವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳಲ್ಲಿ ಚೀನಾಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ವಿದೇಶಾಂಗ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಚೀನಾಗೆ ಭೇಟಿ ನೀಡಿದ್ದು, ಚೀನಾ ಅಧ್ಯಕ್ಷ, ವಿದೇಶಾಂಗ ಸಚಿವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಭಾರತ, ಚೀನಾವನ್ನು ಒಳಗೊಂಡ 13 ಆರ್‌ಐಸಿ ತ್ರಿಪಕ್ಷೀಯ ಸಭೆಯಲ್ಲಿ ಸುಷ್ಮಾ ಪಾಲ್ಗೊಳ್ಳಲಿದ್ದಾರೆ.
ಪ್ರಾದೇಶಿಕ ಶಾಂತಿ, ಸ್ಥಿರತೆ ಸೇರಿದಂತೆ ಜಾಗತಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ಕುರಿತು ಚೀನಾದ ವಿದೇಶಾಂಗ ಸಚಿವರ ಜೊತೆ ಸುಷ್ಮಾ ಸ್ವರಾಜ್ ಚರ್ಚಿಸಲಿದ್ದು, ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.