ನವದೆಹಲಿ: 1984ರ ಸಿಖ್ ಹತ್ಯಾಕಾಂಡ ಪ್ರಕರಣವನ್ನು ಎಸ್ಐಟಿ ಮರು ತನಿಖೆ ಮಾಡಬೇಕೆಂದು ಕೇಂದ್ರ ಸರ್ಕಾರ ನಿಯೋಜಿಸಿದ್ದ ಸಮಿತಿ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾ.ಜಿ.ಪಿ.ಮಾಥುರ್ ನೇತೃತ್ವದ ಸಮಿತಿ ಕಳೆದ ವಾರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ವರದಿಯನ್ನು ನೀಡಿತ್ತು. ಸಿಖ್ ವಿರೋಧಿ ದಂಗೆ ಪ್ರಕರಣವನ್ನು ವಿಶೇಷ ತನಿಖಾ ತಂಡದಿಂದ ಮರು ತನಿಖೆ ನಡೆಸಬೇಕೆಂದು ಶಿಫಾರಸು ಮಾಡಿದೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಪ್ರಸ್ತುತ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು , ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.