ಸಾಂದರ್ಭಿಕ ಚಿತ್ರ 
ದೇಶ

ಮದರಸಾ ಶಾಲೆಗಳಲ್ಲ: ಮಹಾರಾಷ್ಟ್ರ ಸರ್ಕಾರ

ಗೋಮಾಂಸ ನಿಷೇಧ ಮಾಡಿ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಮಹಾರಾಷ್ಟ್ರ ಸರ್ಕಾರ...

ಮುಂಬಯಿ: ಗೋಮಾಂಸ ನಿಷೇಧ ಮಾಡಿ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಮಹಾರಾಷ್ಟ್ರ ಸರ್ಕಾರ ಮತ್ತೊಂದು ವಿವಾದಾತ್ಮಕ ನಿರ್ಧಾರ ಜಾರಿಗೆ ತರಲು ಮುಂದಾಗಿದೆ.
ಮದರಸಾಗಳಿಗೆ ಶಾಲೆಯ ಮಾನ್ಯತೆ ಇಲ್ಲ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಮದ್ರಸಾದಲ್ಲಿ ಕಲಿಯುವ ಮಕ್ಕಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ, ಅವರನ್ನು ಶಾಲೆ ಬಿಟ್ಟ ಮಕ್ಕಳೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಮದರಸಾದಲ್ಲಿ ಕಲಿಯುವ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ನಿರ್ಧರಿಸಿರುವುದಾಗಿ ಹೇಳಿರುವ ಮಹಾರಾಷ್ಟ್ರ ಸರ್ಕಾರ ಮದ್ರಾಸಗಳ ಮಾನ್ಯತೆ ರದ್ದು ಪಡಿಸಲು ಮುಂದಾಗಿದೆ.

ಮಹಾರಾಷ್ಟ್ರದಲ್ಲಿ ಸುಮಾರು 2000 ಮದರಸಾಗಳಿದ್ದು, ಅದರಲ್ಲಿ 1.5 ಲಕ್ಷ ಮಕ್ಕಳು ಕಲಿಯುತ್ತಿದ್ದಾರೆ 2013 ಸಮೀಕ್ಷೆ ತಿಳಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದು, ವಿಧಾನಸಭೆಯಲ್ಲಿ ಈ ಸಂಬಂಧ ಚರ್ಚಿಸುವುದಾಗಿ ಕಾಂಗ್ರೆಸ್ ವಕ್ತಾರ ಸಂಜಯ್ ನಿರುಪಮ್ ತಿಳಿಸಿದ್ದಾರೆ.

ಇನ್ನು ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿದ್ದು, ಇದೊಂದು ಅಸಂವಿಧಾನಿಕ ನಿರ್ಧಾರ, ಇದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಜಮೈತ್ - ಉಲೆಮಾ-ಇ-ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಹಮದ್ ಮದನಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!