ಜಾನ್ ಕಿರ್ಬಿ 
ದೇಶ

ಭಾರತದ ಭಯೋತ್ಪಾದನೆ ಪಾಕ್ ಆರೋಪಕ್ಕೆ ಅಮೆರಿಕ ತಿರುಗೇಟು

ಪಾಕಿಸ್ತಾನ ಪ್ರದೇಶದಲ್ಲಿ ಭಾರತದಿಂದ ಭಯೋತ್ಪಾದನೆ ನಡೆಸುತ್ತಿದೆ ಎಂಬ ಪಾಕಿಸ್ತಾನ ಆರೋಪಕ್ಕೆ ಅಮೆರಿಕ ತಿರುಗೇಟು ನೀಡಿದೆ...

ಇಸ್ಲಾಮಾಬಾದ್: ಪಾಕಿಸ್ತಾನ ಪ್ರದೇಶದಲ್ಲಿ ಭಾರತದಿಂದ ಭಯೋತ್ಪಾದನೆ ನಡೆಸುತ್ತಿದೆ ಎಂಬ ಪಾಕಿಸ್ತಾನ ಆರೋಪಕ್ಕೆ ಅಮೆರಿಕ ತಿರುಗೇಟು ನೀಡಿದೆ.

ಭಾರತ ಭಯೋತ್ಪಾದನೆ ನಡೆಸುತ್ತಿದೆ ಎಂಬುದಕ್ಕೆ ಯಾವುದೇ ಸಾಕ್ಷಿ ಪುರಾವೆಯನ್ನು ಪಾಕಿಸ್ತಾನ ಇಲ್ಲಿಯವರೆಗೂ ಒದಗಿಸಿಲ್ಲ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ಅಮೆರಿಕಾದ ಪ್ರವಾಸ ಕೈಗೊಂಡಿದ್ದ ವಿದೇಶಾಂಗ ಕಾರ್ಯದರ್ಶಿ ಅಜಿಜ್ ಅಹಮದ್ ಜೌದರಿ ಪಾಕಿಸ್ತಾನ ನೆಲದಲ್ಲಿ ಭಾರತ ಭಯೋತ್ಪಾದನೆ ನಡೆಸುತ್ತಿದೆ ಎಂದು ಆರೋಪಿಸಿತ್ತು. ಅಲ್ಲದೆ ಈ ಸಂಬಂಧ ತಮ್ಮ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿತ್ತು. ಆದರೆ ಯಾವುದೇ ಪುರಾವೆಗಳನ್ನು ಪಾಕಿಸ್ತಾನ ಒದಗಿಸಿಲ್ಲ. ವಿನಾಃ ಕಾರಣ ಪಾಕಿಸ್ತಾನ ಭಾರತ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದೆ ಎಂದು ಅಮೆರಿಕ ರಾಜ್ಯ ಇಲಾಖೆ ವಕ್ತಾರ ಜಾನ್ ಕಿರ್ಬಿ ಪಾಕ್ ವಿರುದ್ಧ ಪ್ರಹಾರ ನಡೆಸಿದ್ದಾರೆ.

 ಭಾರತ ಮತ್ತು ಪಾಕಿಸ್ತಾನ ತಮ್ಮ ನಡುವಿನ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದು ಕಿರ್ಬಿ ಉಭಯ ರಾಷ್ಟ್ರಗಳಿಗೆ ಕಿವಿ ಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ