ರಾಯ್ಪುರ: ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿ ಪಡಿಸಲು 3 ಸಾವಿರ ಕೋಟಿ ಪ್ಯಾಕೇಜ್ ನೀಡಬೇಕೆಂದು ಕೇಂದ್ರಕ್ಕೆ ಛ್ತತೀಸ್ ಗಡ ಮುಖ್ಯಮಂತ್ರಿ ರಮಣ್ ಸಿಂಗ್ ಬೇಡಿಕೆ ಇಟ್ಟಿದ್ದಾರೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೈಟ್ಲಿ ಅವರನ್ನು ಭೇಟಿ ಮಾಡಿದ ರಮಣ್ ಸಿಂಗ್ ನೀತಿಆಯೋಗದ ಮೂಲಕ ಇಡಿ ರಾಜ್ಯದ ಅಭಿವೃದ್ಧಿಗೆ 3 ಸಾವಿರ ಕೋಟಿ ಪ್ಯಾಕೇಜ್ ನೀಡಬೇಕೆಂದು ಮನವಿ ಮಾಡಿದ್ದಾರೆ.
ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವುದು 24 ಗಂಟೆಯ ದೂರದರ್ಶನ ಕಾರ್ಯಕ್ರಮ ಪ್ರಸಾರ ಮಾಡುವಂತೆ ರಮಣ್ ಸಿಂಗ್ ಒತ್ತಾಯಿಸಿದ್ದಾರೆ.