ದೇಶ

ವೈದ್ಯರ ನಿರ್ಲಕ್ಷ್ಯಕ್ಕೆ ಕಣ್ಣು ಕಳೆದುಕೊಂಡ ಯುವತಿ: 1.8 ಕೋಟಿ ಪರಿಹಾರ ನೀಡುವಂತೆ ಸುಪ್ರೀಂ ಆದೇಶ

ಸರ್ಕಾರಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಣ್ಣು ಕಳೆದುಕೊಂಡ ಯುವತಿಗೆ ಪರಿಹಾರವಾಗಿ 1.8 ಕೋಟಿ ಹಣ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ...

ನವದೆಹಲಿ: ಸರ್ಕಾರಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಣ್ಣು ಕಳೆದುಕೊಂಡ ಯುವತಿಗೆ ಪರಿಹಾರವಾಗಿ 1.8 ಕೋಟಿ ಹಣ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಕಣ್ಣು ಕಳೆದುಕೊಂಡ ಯುವತಿಗೆ ಇದೀಗ 18 ವರ್ಷವಾಗಿದ್ದು, ಅವಧಿಗೂ ಮುನ್ನವೇ ಚೆನ್ನೈನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಗುವಿನ ಜನನವಾಗಿತ್ತು. ಮಗು ಹುಟ್ಟಿದಾಗ ಸಾಮಾನ್ಯವಾಗಿ ಮಾಡಲೇಬೇಕಾದ ಕೆಲವು ಪರೀಕ್ಷೆಗಳಲ್ಲಿ ಒಂದಾದ ಕಣ್ಣಿನ ಪರೀಕ್ಷೆ (ರೆಟಿನೋಪತಿ ಟೆಸ್ಟ್) ಮಾಡುವಲ್ಲಿ ಅಲ್ಲಿನ ವೈದ್ಯರು ನಿರ್ಲಕ್ಷ್ಯ ತೋರಿಸಿ, ತಾಯಿ ಮತ್ತು ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ.

ನಂತರ ಮಗು ಬೆಳೆಯುತ್ತಿದ್ದಂತೆ ದೃಷ್ಟಿ ಇಲ್ಲದಿರುವುದು ಕಂಡುಬಂದಿದೆ. ಇದಕ್ಕೆ ಕಾರಣ ವೈದ್ಯಕೀಯ ಚಿಕಿತ್ಸೆಯ ಕೊರತೆಯಿಂದಾಗಿ ಎಂಬುದನ್ನು ಅರಿತ ಮಗುವಿನ ಕುಟುಂಬಸ್ಥರು ಪರಿಹಾರಕ್ಕಾಗಿ ರಾಷ್ಟ್ರೀಯ ಗ್ರಾಹಕ ವೇದಿಕೆಯ ಮೊರೆ ಹೋಗಿದ್ದಾರೆ. ನಂತರ ಪರಿಹಾರವಾಗಿ ರು.5 ಲಕ್ಷ ದೊರೆತಿದೆ. ಆದರೆ, ಈ ಪರಿಹಾರ ಧನಕ್ಕೆ ಅಸಮಾಧಾನಗೊಂಡ ಕುಟುಂಬಸ್ಥರು ನಂತರ ಉನ್ನತ ನ್ಯಾಯಾಲಯದ ಮೊರೆ ಹೋಗಿದ್ದಾರೆ. 18 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ ಇದೀಗ ಸುಪ್ರೀಂಕೋರ್ಟ್ ನೊಂದ ಕುಟುಂಬಸ್ಥರಿಗೆ ರು.1.8 ಕೋಟಿ ಪರಿಹಾರ ಧನ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT