ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಗುಜರಾತ್ ಜನರ ಕ್ಷಮೆ ಕೋರಬೇಕು: ಕಾಂಗ್ರೆಸ್

ಗುಜರಾತ್‌ ಗಲಭೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ನವದೆಹಲಿ: ಗುಜರಾತ್‌ ಗಲಭೆ ಸಂಬಂಧ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಮಾಜಿ ಪ್ರಧಾನಿ ಆಟಲ್‌ ಬಿಹಾರಿ ವಾಜಪೇಯಿ ಅವರು ಗುಜರಾತ್‌ ಗಲಭೆ ಬಗ್ಗೆ ಅಸಮಾಧಾನ ಹೊಂದಿದ್ದರಲ್ಲದೆ ಅದು ನಮ್ಮ ಕಡೆಯಿಂದ ಆಗಿರುವ ತಪ್ಪು ಎಂದಿದ್ದರು ಎಂದು ಮಾಜಿ ರಾ ಅಧ್ಯಕ್ಷರಾದ ದುಲತ್‌ ತಿಳಿಸಿದ್ದಾರೆ.

ಈ ವಿಷಯವನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್‌ ನರೇಂದ್ರ ಮೋದಿ ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದಿದೆ.

ಕಾಂಗ್ರೆಸ್‌ ವಕ್ತಾರ ಅಜಯ್‌ಕುಮಾರ್‌ ಮಾತನಾಡಿ ಬಿಜೆಪಿಯದು ಹುಸಿ ರಾಷ್ಟ್ರೀಯವಾದ ಎಂದು ಟೀಕಿಸಿದ್ದಾರೆ. ದುಲತ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಗುಜರಾತ್‌ ಗಲಭೆಗೆ ನರೇಂದ್ರ ಮೋದಿ ಅವರೇ ನೇರ  ಹೊಣೆ ಅವರು ಈ ಕೂಡಲೇ ದೇಶದ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.

ಮೋದಿ ಅವರ ತಪ್ಪನ್ನು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಎತ್ತಿ ತೋರಿಸಿದ್ದಾರೆ. ಮೋದಿ  ಅವರಿಗೆ ರಾಜಧರ್ಮ ಪಾಲಿಸಲು ಬರುತ್ತಿಲ್ಲ  ಅವರಿಗೆ ನೈತಿಕತೆ ಇದ್ದರೆ ಪ್ರಧಾನಿ ಹುದ್ದೆಯನ್ನು ತ್ಯಜಿಸಲಿ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!