ಬಿಹಾರ ಮಾಜಿ ಸಚಿವನಿಗೆ ಚೂರಿ ಇರಿತ: ಓರ್ವನ ಬಂಧನ
ಬಿಹಾರದ ಮಾಜಿ ಸಚಿವ ಎಜಾಝ್-ಉಲ್- ಹಕ್ ಮೇಲೆ ಪರಿಚಿತ ವ್ಯಕ್ತಿಯೊಬ್ಬ ಅವರ ನಿವಾಸದಲ್ಲೇ ದಾಳಿ ನಡೆಸಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ...
ಪಾಟ್ನಾ: ಬಿಹಾರದ ಮಾಜಿ ಸಚಿವ ಎಜಾಝ್-ಉಲ್- ಹಕ್ ಮೇಲೆ ಪರಿಚಿತ ವ್ಯಕ್ತಿಯೊಬ್ಬ ಅವರ ನಿವಾಸದಲ್ಲೇ ದಾಳಿ ನಡೆಸಿದ ಘಟನೆ ನಡೆದಿದೆ.
ಘಟನೆಯಲ್ಲಿ ಎಜಾಝ್ ತೀವ್ರವಾಗಿ ಗಾಯಗೊಂಡಿದ್ದಾರೆ. ಎಜಾಝ್-ಉಲ್- ಹಕ್ ಅವರು ಈಗಾಗಲೇ ಜೈಲುಪಾಲಾಗಿರುವ ಕುಖ್ಯಾತ ರೌಡಿ–ರಾಜಕಾರಣಿ ಮಹಮ್ಮದ್ ಶಹಾಬುದ್ದೀನ್ ಅವರ ಬಾವ.
ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ರಾಘವೇಂದ್ರ ಸಿಂಗ್ ಎಂಬಾತನನ್ನು ಪೊಲೀಸರು ಬೋಜ್ಪುರ್ ಜಿಲ್ಲೆಯಿಂದ ವಶಕ್ಕೆ ಪಡೆದಿದ್ದಾರೆ. ಈ ದಾಳಿಯ ಹಿಂದಿನ ಉದ್ದೇಶ ಏನು ಎನ್ನುವುದರ ಕುರಿತು ತನಿಖೆ ನಡೆದಿದೆ ಎಂದು ಪಾಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ವೈಭವ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.