ಪಿಓಕೆ ನೆಲೆಯೂರಲು ಐಎಸ್ ತೀವ್ರ ಸಂಚು
ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯು(ಐಎಸ್) ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಯೂರಲು ಯತ್ನಿಸುತ್ತಿದೆ...
ಝಾಂಗರ್: ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯು(ಐಎಸ್) ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ) ದಲ್ಲಿ ನೆಲೆಯೂರಲು ಯತ್ನಿಸುತ್ತಿದೆ ಎಂದು ಹಿರಿಯ ಸೇನಾ ಅಧಿಕಾರಿ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಸೇನೆಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಐಎಸ್ ಲ್ಲಿಯವರೆಗೆ ಈ ಬಗ್ಗೆ ಕಾರ್ಯಪ್ರವೃತ್ತರಾಗಿಲ್ಲ. ಆದರೆ ಅವರು ಕಾಶ್ಮೀರದಲ್ಲಿ ನೆಲೆ ಪಡೆಯಲು ಸಂಪೂರ್ಣವಾಗಿ ಯತ್ನಿಸುತ್ತಿದೆ ಎಂದು ಜನರಲ್ ಆಫೀಸರ್ ಕಮಾಡಿಂಗ್(ಜಿಒಸಿ) ಲೆ.ಜನರಲ್ ಕೆ. ಎಚ್. ಸಿಂಗ್ ತಿಳಿಸಿದ್ದಾರೆ.
ಝಾಂಗರ್ನಲ್ಲಿ ಸೇನಾ ಕಾರ್ಯಾಚರಣೆಯ ಬಗ್ಗೆ ಶುಕ್ರವಾರ ಮಾಹಿತಿ ನೀಡುವ ಸಂದರ್ಭದಲ್ಲಿ ಲೆ.ಜನರಲ್ ಕೆ.ಎಚ್ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.