ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಡಿಎಂಕೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪೂ ಪ್ರಶ್ನಿಸಿ ಇಂದು ಡಿಎಂಕೆ ಪಕ್ಷದ ಮುಖಂಡ ಅನ್ಬಗಳನ್ ಅವರು ಮೇಲ್ಮನವಿ ಸಲ್ಲಿಸಿದ್ದಾರೆ.
ಇದೇ ಪ್ರಕರಣ ಸಂಬಂಧ ಒಂದು ವಾರಗಳ ಹಿಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯೊಂದಿಗೆ ಡಿಎಂಕೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.