ರಾಜನಾಥ್ ಸಿಂಗ್ 
ದೇಶ

ವ್ಯಾಪಂ ಹಗರಣ: ಕೋರ್ಟ್‌ಗಳು ಮಾತ್ರ ಸಿಬಿಐ ತನಿಖೆಗೆ ಆದೇಶಿಸಿಬಹುದು; ರಾಜನಾಥ್ ಸಿಂಗ್

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬೆಂಬಲಕ್ಕೆ ನಿಂತಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್....

ನವದೆಹಲಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬೆಂಬಲಕ್ಕೆ ನಿಂತಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಮಧ್ಯಪ್ರದೇಶ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಾತ್ರ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬಹುದು ಎಂದು ಸೋಮವಾರ ಹೇಳಿದ್ದಾರೆ.

'ವ್ಯಾಪಂಗೆ ಸಂಬಂಧಿಸಿದ ಎಲ್ಲ ಪ್ರಕರಣಗಳು ರಾಜ್ಯ ಸರ್ಕಾರದ ಅಡಿ ಬರುವುದಿಲ್ಲ. ಹೀಗಾಗಿ ಹಗರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಹೈಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಪ್ರತಿಪಕ್ಷಗಳು ಪ್ರಕರಣದಲ್ಲಿ ಅನಗತ್ಯ ರಾಜಿಕೀಯ ಮಾಡುತ್ತಿವೆ' ಎಂದು ಆರೋಪಿಸಿದ್ದಾರೆ.

ವ್ಯಾಪಂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸದ ನಂತರ ಚೌಹಾಣ್ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಡ ಹೆಚ್ಚುತ್ತಿದ್ದು, ಇದೀಗ ಕೇಂದ್ರ ಅವರ ಬೆಂಬಲಕ್ಕೆ ನಿಂತಿದೆ.

ಪ್ರಕರಣ ಸಂಬಂಧ 47 ಜನ ನಿಗೂಢವಾಗಿ ಸಾವನ್ನಪ್ಪಿದ್ದರೂ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಮಧ್ಯೆ, ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ಅಲ್ಲದೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಹೀಗಿರುವಾಗ ನಾನು ಸಿಬಿಐಗೆ ವಹಿಸಲು ಹೇಗೆ ಸಾಧ್ಯ ಎಂದು ಚೌಹಾಣ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT