ದೇಶ

ಜನನ ಪ್ರಮಾಣ ಪತ್ರದಲ್ಲಿ ತಂದೆ ಹೆಸರು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್

Mainashree

ನವೆದೆಹಲಿ: ಜನನ ಪ್ರಮಾಣ ಪತ್ರದಲ್ಲಿ ತಂದೆ ಹೆಸರು ದಾಖಲಿಸುವುದನ್ನು ಕಡ್ಡಾಯಗೊಳಿಸಬೇಡಿ ಎಂದು ಪಾಲಿಕೆ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿದೆ.

ಆಧುನಿಕ ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಒಂಟಿಯಾಗಿ ಮಕ್ಕಳನ್ನು ಬೆಳೆಸಲು ಬಯಸುತ್ತಾರೆ. ಈ ಹಿನ್ನಲೆಯಲ್ಲಿ ವಿವಾಹವಾಗದ ಸಂಬಂಧದಲ್ಲಿ ಜನಿಸಿದ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಂದೆ ಹೆಸರು ದಾಖಲಿಸುವುದನ್ನು ಕಡ್ಡಾಯಗೊಳಿಸಬೇಡಿ ಎಂದು ಪಾಲಿಕೆ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಕಾಲ ಬದಲಾಗುತ್ತಿದ್ದಂತೆ ಅದಕ್ಕೆ ನಾವು ಸರಿಹೊಂದಿಕೊಳ್ಳಬೇಕು ಹಾಗೇ ಕೆಲ ಕಾನೂನುಗಳನ್ನು ಬದಲಿಸಬೇಕು. ಪ್ರಸ್ತುತ ದಿನಗಳಲ್ಲಿ ಅವಿವಾಹಿತ ತಾಯಂದಿರು, ಸಿಂಗಲ್ ಪೇರೆಂಟ್ ಹೆಚ್ಚಾಗುತ್ತಿದ್ದಾರೆ. ಇವರು ಮಗುವಿನ ಜನನ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದಾಗ ಸಂಬಂಧಪಟ್ಟ ಅಧಿಕಾರಿಗಳು, ಆ ಮಗುವಿನ ತಂದೆಯ ಹೆಸರು ನಮೂದಿಸುವಂತೆ ಹೇಳದೇ ಪ್ರಮಾಣ ಪತ್ರ ವಿತರಿಸಬೇಕು ಎಂದು ಸುಪ್ರೀಂ ಹೇಳಿದೆ.

ದೇಶದಲ್ಲಿ ಜನಿಸುವ ಪ್ರತಿ ಮಗುವಿನ ಜನನ ಮಾಹಿತಿ ದಾಖಲಿಸುವ ಬಗ್ಗೆ ಅಗತ್ಯೆ ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸವಾಗಿದೆ ಎಂದು ಸುಪ್ರೀಂ ತಿಳಿಸಿದೆ.

SCROLL FOR NEXT