ದೇಶ

ಜನರ ಒತ್ತಡಕ್ಕೆ ಮಣಿದ ಮಧ್ಯಪ್ರದೇಶ ಸಿಎಂ, ವ್ಯಾಪಂ ಹಗರಣ ಸಿಬಿಐಗೆ ಶಿಫಾರಸು

Lingaraj Badiger

ಭೋಪಾಲ್: ಕಡೆಗೂ ಜನರ ಒತ್ತಡಕ್ಕೆ ಮಣಿದಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವ್ಯಾಪಂ ಹಗರಣವನ್ನು ಸಿಬಿಐಗೆ ಶಿಫಾರಸು ಮಾಡಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚೌಹಾಣ್, ಕೋರ್ಟ್ ನಿರ್ದೇಶಿತ ಸಿಬಿಐ ತನಿಖೆಗೆ ತಾವು ಸಿದ್ಧರಿದ್ದು, ಮಧ್ಯಪ್ರದೇಶ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಲಿ ಎಂದಿದ್ದಾರೆ. ಅಲ್ಲದೆ ಈ ಸಂಬಂಧ ಹೈಕೋರ್ಟ್‌ಗೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಸಮರ್ಥಿಸಿಕೊಂಡ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ಜನತೆಯ ಒತ್ತಾಸೆಗೆ ಮಣಿದು ಹಗರಣವನ್ನು ಸಿಬಿಐಗೆ ವಹಿಸುತ್ತಿರುವುದಾಗಿ ಹೇಳಿದ್ದಾರೆ.

ಸಿಬಿಐ ತನಿಖೆಗೆ ಹೈಕೋರ್ಟ್ ಸಹ ಒಪ್ಪಿಗೆ ಸೂಚಿಸಿಲ್ಲ. ಆದರೂ ಜನರ ಭಾವನೆಗಳಿಗೆ ಮನ್ನಣೆ ನೀಡುತ್ತಿದ್ದೇನೆ ಎಂದಿದ್ದಾರೆ.

ವ್ಯಾಪಂ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಸೇರಿದಂತೆ ಇತರೆ ಪಕ್ಷಗಳು ಒತ್ತಡ ಹೇರಿದ್ದವು.

SCROLL FOR NEXT