ಜೆಡಿಯು ಶಾಸಕ ಅನಂತ್ ಸಿಂಗ್ 
ದೇಶ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಅನಂತ್ ಸಿಂಗ್ ಗೆ ಜು.20ರವರೆಗೆ ನ್ಯಾಯಾಂಗ ಬಂಧನ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಬಿಹಾರ್ ಜೆಡಿಯು ಶಾಸಕ ಅನಂತ್ ಸಿಂಗ್ ನ್ಯಾಯಾಂಗ ಬಂಧನವನ್ನು ಜುಲೈ.20 ರವರೆಗೆ ಬುಧವಾರ ಮುಂದೂಡಲಾಗಿದೆ...

ಪಾಟ್ನ: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಬಿಹಾರ ಜೆಡಿಯು ಶಾಸಕ ಅನಂತ್ ಸಿಂಗ್ ನ್ಯಾಯಾಂಗ ಬಂಧನವನ್ನು ಜುಲೈ.20 ರವರೆಗೆ ಬುಧವಾರ ಮುಂದೂಡಲಾಗಿದೆ.

ಯುವಕನೊಬ್ಬನನ್ನು ಅಪಹರಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಶಾಸಕ ಅನಂತ್ ಸಿಂಗ್ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಶಾಸಕ ಅನಂತ್ ಸಿಂಗ್ ಅವರ ಮೇಲೆ ಅಪಹರಣ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಜೂನ್ 24 ರಂದು ಅನಂತ್ ಸಿಂಗ್ ಇದ್ದ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಸ್ಥಳದಲ್ಲಿದ್ದ 12 ಮಂದಿ ಜೊತೆಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.

ಪ್ರಕರಣ ಸಂಬಂಧ ಇಂದು ವಿಚಾರಣೆಯಿದ್ದ ಕಾರಣ ಪೊಲೀಸರು ಬಿಗಿ ಭದ್ರತೆಯೊಂದಿಗೆ ಅನಂತ್ ಸಿಂಗ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ರಾಘವೇಂದ್ರ ನಾರಾಯಣ್ ಸಿಂಗ್ ಅವರು ಅನಂತ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.20 ರವರೆಗೆ ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!