ಉಕ್ಕು 
ದೇಶ

ಅಮೆರಿಕವನ್ನು ಹಿಂದಿಕ್ಕಿದ ಭಾರತ

ಉಕ್ಕು ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿರುವ ಭಾರತ ಜಾಗತಿಕ ಮಟ್ಟದಲ್ಲಿ ಮೂರನೆ ಸ್ಥಾನಕ್ಕೇರಿದೆ ಎಂದು ಕೇಂದ್ರ ಉಕ್ಕು ಮತ್ತು ಗಣಿ ಖಾತೆ...

ನವದೆಹಲಿ: ಉಕ್ಕು ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿರುವ ಭಾರತ ಜಾಗತಿಕ ಮಟ್ಟದಲ್ಲಿ ಮೂರನೆ ಸ್ಥಾನಕ್ಕೇರಿದೆ ಎಂದು ಕೇಂದ್ರ ಉಕ್ಕು ಮತ್ತು ಗಣಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್  ಮಂಗಳವಾರ ತಿಳಿಸಿದ್ದಾರೆ. ಇದುವ ರೆಗೂ ಭಾರತ ನಾಲ್ಕನೆ ಸ್ಥಾನದಲ್ಲಿತ್ತು. ಮುಂದಿನ ಹತ್ತು ವರ್ಷಗಳಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿಯನ್ನು ಹೊಂದಿ ರುವುದಾಗಿಯೂ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ಸಂಸದೀಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ತೋಮರ್, ಭಾರತದ ಉಕ್ಕು ಉದ್ಯಮ ಉತ್ತಮ ಪ್ರಗತಿ ಸಾಧಿಸುತ್ತಿದೆ. ಕಳೆದ ವರ್ಷ ವಿಶ್ವದಲ್ಲಿನ ಕಚ್ಚಾ ಉಕ್ಕು ಉತ್ಪಾದನೆಯಲ್ಲಿ ಭಾರತದ ಪಾಲು ಶೇ.8ಕ್ಕಿಂತಲೂ ಹೆಚ್ಚಾಗಿತ್ತು ಎಂದಿದ್ದಾರೆ. ಆದರೂ ಭಾರತದಲ್ಲಿ ತಲಾ ಉಕ್ಕು ಬಳಕೆ 60 ಕೆಜಿ ಮಾತ್ರ ಇದೆ. ಜಾಗತಿಕ ಮಟ್ಟದಲ್ಲಿ ಈ ಪ್ರಮಾಣ 216 ಕೆಜಿಯಷ್ಟಿದೆ. ಇದು ಭಾರತ ಹೆಚ್ಚಿನ ಪ್ರಮಾಣದ ಉಕ್ಕು ತಯಾರಿಸಲು ಸಾಕಷ್ಟು ಅವಕಾಶಗಳಿವೆ ಎಂಬುದನ್ನು ತೋರಿಸುತ್ತದೆ ಎಂದು ತೋಮರ್ ಅಭಿಪ್ರಾಯಪಟ್ಟಿದ್ದಾರೆ. ಭಾರತದ ಉಕ್ಕು ಉದ್ಯಮ ವಿಸ್ತರಣೆಯಾಗುತ್ತಿದೆ. ಹಳೆಯ ಘಟಕಗಳನ್ನು ಆಧುನೀಕರಣಗೊಳಿಸುವುದರೊಂದಿಗೆ ವಿಸ್ತರಿಸಲಾಗುತ್ತಿದೆ. ಹೊಸ ಘಟಕಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾ
ಗುತ್ತಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಎಸ್‍ಎಐಎಲ್‍ನ ಐಐಎಸ್ ಸಿಒ ಉಕ್ಕು ಘಟಕದಲ್ಲಿ 4160 ಕ್ಯೂಬಿಕ್ ಮೀಟರ್‍ನ ಭಾರತದ ಅತಿದೊಡ್ಡ ಬ್ಲಾಸ್ಟ್  ಫರ್ನೇಸ್ ಉದ್ಘಾಟಿಸಿದರು. ಕೆಲವು ಮೌಲ್ಯ ವರ್ಧಿತ ಉತ್ಪನ್ನಗಳನ್ನು ಭಾರತ ಇಂದಿಗೂ ಆಮದು ಮಾಡಿಕೊಳ್ಳುತ್ತಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹೆಚ್ಚಿನ
ಪ್ರಮಾಣದಲ್ಲಿ ಆಗಬೇಕಿದೆ ಎಂದು ತೋಮರ್  ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT