ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನ್ಯಾಯಯುತ ತನಿಖೆ ಮೇಲೆ ನನಗೆ ವಿಶ್ವಾಸವಿದೆ: ಶಿವರಾಜ್ ಸಿಂಗ್ ಚೌಹಾಣ್

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಹಲವಾರು ಟೀಕೆಗಳು ವ್ಯಕ್ತವಾಗುತ್ತಿದ್ದರೂ ಮೌನವನ್ನು ಮುಂದುವರೆಸಿಕೊಂಡು ಬಂದಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಇದೀಗ...

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
Updated On : 8 Jul 2015, 3:23 am

ನವದೆಹಲಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಹಲವಾರು ಟೀಕೆಗಳು ವ್ಯಕ್ತವಾಗುತ್ತಿದ್ದರೂ ಮೌನವನ್ನು ಮುಂದುವರೆಸಿಕೊಂಡು ಬಂದಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಇದೀಗ ತಮ್ಮ ಮೌನ ಮುರಿದಿದ್ದು, ವ್ಯಾಪಂ ಹಗರಣದ ತನಿಖೆ ನ್ಯಾಯಯುತವಾಗಿ ನಡೆಯಲಿದ್ದು ತನಿಖೆ ಮೇಲೆ ನನಗೆ ಸಂಪೂರ್ಮ ವಿಶ್ವಾಸವಿದೆ ಎಂದು ಬುಧವಾರ ಹೇಳಿದ್ದಾರೆ.  

ಈ ಕುರಿತಂತೆ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ವ್ಯಾಪಂ ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ತನಿಖೆ ಬಗ್ಗೆ ಚಿಂತನೆ ನಡೆಸಿದಾಗ ಪ್ರಕರಣ ತುಂಬಾ ಆಳವಾಗಿರುವುದು ತಿಳಿಯಿತು. ಹೀಗಾಗಿ ಹಗರಣ ತನಿಖೆಯನ್ನು ಕೂಡಲೇ ರಾಜ್ಯದ ವಿಶೇಷ ತನಿಖಾ ತಂಡಕ್ಕೆ ನೀಡಲಾಯಿತು.

ರಾಜ್ಯದಲ್ಲಿ ಉಂಟಾದ ಬಿಗು ವಾತಾವರಣವೇ ಹಗರಣದ ತನಿಖೆಯನ್ನು ಸಿಬಿಐ ವಶಕ್ಕೆ ಒಪ್ಪಿಸಲು ಕಾರಣವಾಯಿತು. ನನಗೆ ಎಸ್ಐಟಿ ತನಿಖೆ ಮೇಲೆ ಗೌರವವಿದೆ. ಹಗರಣದ ತನಿಖೆ ನ್ಯಾಯಯುತವಾಗಿ ನಡೆಯುತ್ತದೆ ಎಂಬುದರಲ್ಲಿ ನನಗೆ ವಿಶ್ವಾಸವಿದೆ. ಹೀಗಾಗಿ ಹುದ್ದೆಗೆ ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ನನ್ನ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಪಕ್ಷದವರಿಗೆ ಸಂಪೂರ್ಣ ವಿಶ್ವಾಸವಿದ್ದು, ಪಕ್ಷ ನನಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿದೆ. ಮೋದಿ ಹಾಗೂ ಅಮಿತ್ ಶಾ ಮತ್ತು ಪಕ್ಷದ ಇನ್ನಿತರೆ ನಾಯಕರನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿರುವ ಅವರು, ದಿಗ್ವಿಜಯ್ ಸಿಂಗ್ ಒಬ್ಬ ವಿಧೂಷಕನಿದ್ದಂತೆ. ಸತ್ಯ ಎಂದಿಗೂ ಮರೆಮಾಚಲು ಸಾಧ್ಯವಿಲ್ಲ. ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments