ಅತ್ಯಾಚಾರ ಸಂತ್ರಸ್ತೆ 
ದೇಶ

ಅತ್ಯಾಚಾರ ಆರೋಪ: ದೆಹಲಿ ಎಎಸ್ಐ ಜಯವೀರ್ ಸಿಂಗ್ ಬಂಧನ

ಪಂಬಾಬಿಭಾಗ್ ಠಾಣೆ ಎಎಸ್ಐ ಜಯವೀರ್ ಸಿಂಗ್ ಗನ್ ನಿಂದ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜಯವೀರ್ ರನ್ನು ಬಂಧಿಸಲಾಗಿದೆ...

ನವದೆಹಲಿ: ಪಂಬಾಬಿಭಾಗ್ ಠಾಣೆ ಎಎಸ್ಐ ಜಯವೀರ್ ಸಿಂಗ್ ಗನ್ ನಿಂದ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜಯವೀರ್ ರನ್ನು ಬಂಧಿಸಲಾಗಿದೆ.

ದೆಹಲಿಯ ರಾಣಿಭಾಗ್ ಪ್ರದೇಶದಲ್ಲಿನ ವ್ಯಾಪಾರಿಯೊಬ್ಬನ ಮನೆಗೆ ವಿಚಾರಣೆಗೆಂದು 5-7-2015ರಂದು ಹೋಗಿದ್ದ ಜಯವೀರ್ ಸಿಂಗ್ ಮನೆಕೆಲಸದಾಕೆಗೆ ಗನ್ ತೋರಿಸಿ ಬೆದರಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ಸಂಬಂಧ ಎಎಸ್ಐ ಜಯವೀರ್ ಸಿಂಗ್ ರನ್ನು ಬಂಧಿಸಿ ಎಫ್ಐಆರ್ ದಾಖಿಲಿಸಿ ನಂತರ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧ ದೆಹಲಿ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿ ಮಾತನಾಡಿ ಇಲಾಖೆಯ ವಿಚಾರಣೆವರೆಗೂ ಕಾಯುವ ಅವಶ್ಯಕತೆ ಇಲ್ಲ. ಹೀಗಾಗಿ ಆರೋಪಿಯನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. ಮಹಿಳೆಯ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಿನ್ನೆ 23 ರ ಹರೆಯದ ಅತ್ಯಾಚಾರ ಸಂತ್ರಸ್ತೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದರು. ವರದಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!