ಮಾಜಿ ವಿದೇಶಾಂಗ ಇಲಾಖೆ ಸಚಿವ ಸಲ್ಮಾನ್ ಖುರ್ಷಿದ್ (ಸಂಗ್ರಹ ಚಿತ್ರ) 
ದೇಶ

ಪಾಕಿಸ್ತಾನಕ್ಕೆ ಮೋದಿ ಭೇಟಿಯಿಂದ ಗರ್ಮನಾರ್ಹ ಫಲಿತಾಂಶ ಸಾಧ್ಯವಿಲ್ಲ : ಖುರ್ಷಿದ್

ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಭೇಟಿಯಿಂದ ಗಮನಾರ್ಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಕಾಂಗ್ರೆಸ್ ಸಲಹೆ ನೀಡಿದೆ.

ಹೈದರಾಬಾದ್: ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಭೇಟಿಯಿಂದ ಗಮನಾರ್ಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಕಾಂಗ್ರೆಸ್ ಸಲಹೆ ನೀಡಿದೆ.
2016 ರಲ್ಲಿ ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ಇಸ್ಲಾಮಾಬಾದ್ ಗೆ ಭೇಟಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು ಮೋದಿ ಭೇಟಿಯಿಂದ ದ್ವಿಪಕ್ಷೀಯ ಸಂಬಂಧದಲ್ಲಿ  ಗಮನಾರ್ಹವಾದ ಅಥವಾ ಐತಿಹಾಸಿಕ ಫಲಿತಾಂಶ ನಿರೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಪ್ರಧಾನಿ ಮೋದಿ ಸಹ ಇಂತಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಮಾಜಿ ವಿದೇಶಾಂಗ ಇಲಾಖೆ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಹಲವು ದಶಕಗಳಿಂದ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸಂಬಂಧ ವೃದ್ಧಿಗೊಳಿಸಲು ಭಾರತ ಶ್ರಮಿಸುತ್ತಿದೆ. ಆದರೆ ಅದರಿಂದ ಯಾವುದೇ ಸಕಾರಾತ್ಮಕ ಫಲಿತಾಂಶವೂ ದೊರೆತಿಲ್ಲ. ಅದ್ದರಿಂದ ಪ್ರಧಾನಿ ಮೋದಿ ವರು ಹೆಚ್ಚಿನ ನಿರೀಕ್ಷೆ ಹೊಂದುವುದು ತಪ್ಪು. ಈ ವರೆಗೂ ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಫಲಿತಾಂಶ ತೃಪ್ತಿದಾಯಕವಾಗಿಲ್ಲ. ಈ ಬಾರಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆಯೆ ಹೊರತು ಸಂಭ್ರಮಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಪಾಕಿಸ್ತಾನದಲ್ಲಿ ಸೇನೆಯ ಪಾತ್ರ ಏನೆಂಬುದು ನಮಗೆ ತಿಳಿದಿದೆ. ಆದ್ದರಿಂದ ದ್ವಿಪಕ್ಷೀಯ ಮಾತುಕತೆ ನಡೆದರೂ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಖುರ್ಷಿದ್ ಹೇಳಿದ್ದಾರೆ. ಪಾಕಿಸ್ತಾನದೊಂದಿಗೆ ಮಾತುಕತೆ ಪ್ರಾಂಭಿಸಿರುವ ಮೋದಿ ಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆ. ನಮ್ಮೊಂದಿಗೆ ಮೋದಿ ಮಾತನಾಡುವುದಿಲ್ಲ. ನಮ್ಮೊಂದಿಗೆ ಮಾತನಾಡುವವರೆಗೂ ಪಾಕಿಸ್ತಾನದೊಂದಿಗೆ ಮೋದಿ ಏನು ಮಾತನಾಡಿದರು ಎಂಬುದು ನಮಗೆ ತಿಳಿಯುವುದಿಲ್ಲ ಎಂದು ಖುರ್ಷಿದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT