ರಾಜನಾಥ್ ಸಿಂಗ್ ಟ್ವೀಟ್ ಖಾತೆಗೆ 5 ಲಕ್ಷ ಅನುಯಾಯಿಗಳು
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸಚಿವರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸಚಿವರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನಂತರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವಿಟರ್ನಲ್ಲಿ 5 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.
ಗೃಹ ಸಚಿವರು ಜುಲೈ 2014ರಲ್ಲಿ ಸರ್ಕಾರಿ ಟ್ವಿಟರ್ ಖಾತೆ ತೆರೆದಿದ್ದು, @HMOIndiaಗೆ ಕಳೆದ ರಾತ್ರಿ ಫಾಲೋಯರ್ಸ್ ಗಳ ಸಂಖ್ಯೆ ಐದು ಲಕ್ಷ ದಾಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಖಾತೆಗೆ 68 ಲಕ್ಷ ಫಾಲೋಯರ್ಸ್ ಇದ್ದು, ಪ್ರಧಾನಿ ನಂತರ ಗೃಹ ಸಚಿವರೇ ಹೆಚ್ಚು ಪಾಲೋಯರ್ಸ್ ಹೊಂದಿದ್ದಾರೆ.
ಗೃಹ ಸಚಿವ ರಾಜ್ನಾಥ್ ಸಿಂಗ್ ಅವರ ವೈಯಕ್ತಿಕ ಖಾತೆ @BJPRajnathsinghಗೆ 16 ಲಕ್ಷ ಫಾಲೋಯರ್ಸ್ ಇದ್ದಾರೆ. ಅಧಿಕೃತ ಟ್ವೀಟರ್ ಖಾತೆಯಲ್ಲಿ ಸಚಿವರ ಹೇಳಿಕೆಗಳು, ಕಾರ್ಯನೀತಿಗಳು, ಕಾರ್ಯಕ್ರಮಗಳು ಹಾಗೂ ಅವರು ಭಾಗವಹಿಸಿದ ಕಾರ್ಯಕ್ರಮಗಳ ಫೋಟೋಗಳನ್ನು ನಿರಂತರವಾಗಿ ಅಪ್ಡೇಟ್ ಮಾಡಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.