ಮುಜಾಫರ್ ನಗರ: ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು ಸೋಮವಾರ ಆಗ್ರಹಿಸಿದ್ದಾರೆ.
ಅಸಾರಾಂ ಬಾಪು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿ ಎಂದು ಪರಿಗಣಿಸಲಾಗಿದ್ದ ಅಸಾರಾಂ ಆಶ್ರಮದ ಆಪ್ತ ವ್ಯಕ್ತಿ ಹಾಗೂ ಅಡುಗೆ ಕೆಲಸದಾತ ಅಖಿಲ್ ಗುಪ್ತಾ ಅವರನ್ನು ಜ.12 ರಂದು ಅನುಮಾನಾಸ್ಪದ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಪ್ರಕರಣ ಕುರಿತಂತೆ ಮಾತನಾಡಿರುವ ಮೃತ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು, ಮಗನ ಸಾವಿಗೆ ಸಂಬಂಧಿಸಿದ ಆರೋಪಿಗಳನ್ನು ಹಿಡಿದು ಶಿಕ್ಷಿಸುವಂತೆ ಹಲವು ಬಾರಿ ಸ್ಥಳೀಯ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರೂ, ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಗುಜರಾತ್ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.