ಆಜಂ ಖಾನ್(ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ಮೋದಿ ಪಾಕ್ ಭೇಟಿಯಿಂದ ವಾಪಸ್ ಬರುವಾಗ ಉಗ್ರರನ್ನು ಹಿಡಿದು ತರಲಿ: ಅಜಂ ಖಾನ್

ಪಾಕಿಸ್ತಾನಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ವಾಪಸ್ಸಾಗುವಾಗ ತಮ್ಮದೇ ವಿಮಾನದಲ್ಲಿ ಭಾರತಕ್ಕೆ ಬೇಕಾಗಿರುವ ಉಗ್ರರನ್ನು ಕರೆ ತರಲಿ ಎಂದು ಉತ್ತರ ಪ್ರದೇಶ ಸಚಿವ ಆಜಂ ಖಾನ್ ಹೇಳಿದ್ದಾರೆ.

ಝಾನ್ಸಿ: ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು 2016 ರಲ್ಲಿ ಪಾಕಿಸ್ತಾನಕ್ಕೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ವಾಪಸ್ಸಾಗುವಾಗ ತಮ್ಮದೇ ವಿಮಾನದಲ್ಲಿ ಭಾರತಕ್ಕೆ ಬೇಕಾಗಿರುವ ಉಗ್ರರನ್ನು ಕರೆತರಲಿ ಎಂದು ಉತ್ತರ ಪ್ರದೇಶ ಸಚಿವ ಆಜಂ ಖಾನ್ ಹೇಳಿದ್ದಾರೆ.

ಮುಂಬೈ ದಾಳಿ ರೂವಾರಿ ಲಖ್ವಿಯೊಂದಿಗೆ ಕಂದಹಾರ್ ಗೆ ತೆರಳಿದ ಉಗ್ರರನ್ನು ಮೋದಿ ವಾಪಸ್ ಕರೆ ತರಲಿ ಎಂದು ಆಜಂ ಖಾನ್ ಪ್ರಧಾನಿ ನರೇಂದ್ರ ಮೋದಿಗೆ ಸಲಹೆ ನೀಡಿದ್ದಾರೆ. ಮೌಲಾನಾ ಮಸೂದ್ ಅಜರ್ ಸೇರಿದಂತೆ ಹಲವು ಉಗ್ರರನ್ನು ಭಾರತ ಸರ್ಕಾರವೇ ವಿಶೇಷ ವಿಮಾನದಲ್ಲಿ ಕಂದಹಾರ್ ಗೆ ಕಳಿಸಿತ್ತು. 155  ಪ್ರಯಾಣಿಕರನ್ನು ಉಗ್ರರು ಒತ್ತೆಯಾಳುಗಳಾಗಿಟ್ಟುಕೊಂಡಿದ್ದರಿಂದ ಅಂದಿನ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಈಗ ಆ ಉಗ್ರರನ್ನು ಮೋದಿ ವಾಪಸ್ ಕರೆತರಬೇಕೆಂದು ಆಜಂ ಖಾನ್ ಹೇಳಿದ್ದಾರೆ.     
ಇತ್ತೀಚೆಗಷ್ಟೇ ನಡೆದ ಭಾರತ- ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ವೇಳೆ 26 /11 ರ ಮುಂಬೈ ದಾಳಿ ರೂವಾರಿ ಲಖ್ವಿ, ಜೆಯುಡಿ ಉಗ್ರ ಸಂಘಟನೆಯ ಭಯೋತ್ಪಾದಕ ಹಫೀಜ್ ಸಯೀದ್ ನನ್ನು ಭಾರತಕ್ಕೆ ಒಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಆಜಂ ಖಾನ್ ಭಾರತಕ್ಕೆ ಬೇಕಾಗಿರುವ ಉಗ್ರರನ್ನು ಮೋದಿಯೇ ತಮ್ಮ ವಿಮಾನದಲ್ಲಿ ಕರೆತರ್ಲಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ