ವಾಮಾಚಾರಕ್ಕೆ ಸಂಬಂಧಪಟ್ಟ ಸಂಗ್ರಹ ಚಿತ್ರ 
ದೇಶ

ವಾಮಾಚಾರ ಶಂಕೆ: ಒಂದೇ ಕುಟುಂಬದ 6 ಮಂದಿ ಸಾವು

ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ...

ಭುವನೇಶ್ವರ:ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ ಘಟನೆ ಒರಿಸ್ಸಾ ರಾಜ್ಯದ ಕಿಯೋಂಜರ್ ಜಿಲ್ಲೆಯ ಕುಗ್ರಾಮವೊಂದರಲ್ಲಿ ನಡೆದಿದೆ.

ದಂಪತಿ ಮತ್ತು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಾಮಾಚಾರ ನಡೆಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.  ಇದರಲ್ಲಿ ಸ್ಥಳೀಯ ಅರ್ಚಕನೊಬ್ಬನ ಪಾತ್ರ ಇರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿದ್ದು, ಇನ್ನುಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 302 ಮತ್ತು 34ರಡಿ ಕೇಸು ದಾಖಲಾಗಿದೆ.

ಕಿಯೋಂಜರ್ ನಿಂದ 70 ಕಿ.ಮೀ ದೂರದಲ್ಲಿ ಜೋಡಾ ಪೊಲೀಸ್ ಸ್ಟೇಷನ್ ನ ಸರಹದ್ದಿನ ಮುಂಡಾ ಸಹಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಟುಂಬಸ್ಥರ ಮೇಲೆ ದುಷ್ಕರ್ಮಿಗಳು ವಾಮಾಚಾರ ನಡೆಸಿದ್ದರಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ