ನಾವಿಕನ ಇಟಲಿ ವಾಸದ ಅವಧಿ ವಿಸ್ತರಿಸಿದ ಸುಪ್ರೀಂ
ಭಾರತೀಯ ಮೀನುಗಾರರ ಹತ್ಯೆ ಆರೋಪ ಎದುರಿಸುತ್ತಿರುವ ಇಟಲಿಯ ನಾವಿಕ ಮ್ಯಾಸಿಮಿಲಿಯಾನೋ ಲ್ಯಾಟೋರ್...
ನವದೆಹಲಿ: ಭಾರತೀಯ ಮೀನುಗಾರರ ಹತ್ಯೆ ಆರೋಪ ಎದುರಿಸುತ್ತಿರುವ ಇಟಲಿಯ ನಾವಿಕ ಮ್ಯಾಸಿಮಿಲಿಯಾನೋ ಲ್ಯಾಟೋರ್ ಗೆ ಇನ್ನೂ 6 ತಿಂಗಳ ಕಾಲ ಇಟಲಿಯಲ್ಲಿರಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.
ವೈದ್ಯಕೀಯ ಕಾರಣಗಳಿಗಾಗಿ ಅವಧಿ ವಿಸ್ತರಿಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಈ ಆದೇಶ ನೀಡಿದೆ.
ಇದೇ ವೇಳೆ, ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರಾದೇಶಿಕ ವ್ಯಾಪ್ತಿಯ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆಗೆ ಇಟಲಿ ಮುಂದಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ನರಸಿಂಹ, ಭಾರತ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದೆ ಎಂದಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.