ನವದೆಹಲಿ: ಐಪಿಎಲ್ ನಲ್ಲಿ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಲೋಧಾ ಸಮಿತಿ ನೀಡಿರುವ ತೀರ್ಪನ್ನು ಬಿಸಿಸಿಐ ಸ್ವಾಗತಿಸಿದೆ.
ನ್ಯಾಯಾಂಗ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ತೀರ್ಪಿನ ಸಂಪೂರ್ಣ ವರದಿ ಓದಿದ ನಂತರ ಮುಂದಿನ ಕ್ರಮದ ಬಗ್ಗೆ ಸರಿಯಾದ ದಿಕ್ಕಿನಲ್ಲಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ್ರಿಕೆಟ್ ನಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಸ್ವಚ್ಛತೆಯನ್ನು ಬಿಸಿಸಿಐ ಬಯಸುತ್ತದೆ ಎಂದು ದಾಲ್ಮಿಯಾ ಹೇಳಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಸಹ ಇದೇ ಮಾತನ್ನು ಪುನರುಚ್ಛರಿಸಿದ್ದಾರೆ.
ಲೋಧಾ ಸಮಿತಿಯಲ್ಲಿದ್ದ ನ್ಯಾಯಮೂರ್ತಿ ಮುಕುಲ್ ಮುದ್ಗಲ್, ಲೋಧಾ ಸಮಿತಿಯ ಇಂದಿನ ತೀರ್ಪಿನಿಂದ ಜನರಿಗೆ ಐಪಿಎಲ್ ಲೀಗ್ ಮೇಲಿನ ನಂಬಿಕೆಯನ್ನು ಮರುಕಳಿಸಲಿದೆ ಎಂದು ಹೇಳಿದ್ದಾರೆ.