ಜಮ್ಮು: ಜಮ್ಮು ಗಡಿಯಲ್ಲಿ ಪಾಕ್ ಸೈನಿಕರು ಮತ್ತೆ ತಮ್ಮ ಚಾಳಿಯನ್ನು ಮುಂದುವರೆಸಿದ್ದು, ಜಮ್ಮು-ಕಾಶ್ಮೀರ ಗಡಿಯಲ್ಲಿ ಮತ್ತೆ ಗುಂಡಿನ ಕಾಳಗ ಮುಂದುವರೆದಿದೆ.
ಇನ್ನೆರಡು ದಿನಗಳಲ್ಲಿ ಜಮ್ಮ ಕಾಶ್ಮೀರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಸೈನಿಕರು ಮತ್ತೆ ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದು, ಬುಧವಾರ ಬೆಳಿಗ್ಗೆಯಿಂದಲೇ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೆ, ಆಕ್ರಮಣಕಾರಿ ಶೆಟ್ ಗಳ ದಾಳಿ ನಡೆಸಿದ್ದರಿಂದ ಓರ್ವ ಸ್ಥಳೀಯ ನಾಗರೀಕ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಡಿ ಭದ್ರತಾ ಪಡೆಯ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಗಡಿಯಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ಮುಂದುವರೆಸಿದ್ದು, ಗುಂಡಿನ ದಾಳಿಗೆ ಭಾರತೀಯ ಸೈನಿಕರು ದಿಟ್ಟ ಉತ್ತರ ನೀಡುತ್ತಿದ್ದಾರೆ.