ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ನೀತಿ ಆಯೋಗ ಬುಧವಾರ ನಡೆಯುತ್ತಿದ್ದು, ಸಭೆಗೆ ಕಾಂಗ್ರೆಸ್ ನೇತೃತ್ವವಿರುವ ಸರ್ಕಾರವಿರುವ 9 ರಾಜ್ಯಗಳ ಮುಖ್ಯಮಂತ್ರಿಗಳು ಗೈರು ಹಾಜರಾಗಿರುವುದಾಗಿ ತಿಳಿದುಬಂದಿದೆ.
ನವದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿವಾಸದಲ್ಲಿ ನೀತಿ ಆಯೋಗ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪ್ರಮುಖವಾಗಿ ವಿವಾದಿತ ಭೂಸ್ವಾಧೀನ ಮಸೂದೆ ಕುರಿತಂತೆ ಚರ್ಚೆ ನಡೆಸಲಿದೆ ಎಂದು ಹೇಳಲಾಗುತ್ತಿದೆ.
ಸಭೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಪಶ್ಚಿಮಬಂಗಾಳದ ಮಮತಾ ಬ್ಯಾನರ್ಜ ಸೇರಿದಂತೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿನ ಎಲ್ಲಾ ಸಿಎಂಗಳು ಗೈರು ಹಾಜರಾಗಿದ್ದು, ಉಳಿದೆಲ್ಲಾ ರಾಜ್ಯಗಳ ಮುಖ್ಯಮಂತ್ರಿ, ಅಧಿಕಾರಿಗಳು ಭಾಗಿಯಾಗಿರುವುದಾಗಿ ತಿಳಿದುಬಂದಿದೆ.