ನವದೆಹಲಿ: 1993ರ ಮುಂಬೈ ಬಾಂಬ್ ಸ್ಪೋಟದ ಪ್ರಮುಖ ರುವಾರಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಿಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಲಿದ್ದು, ಸುಪ್ರೀಂ ಯಾವುದೇ ರೀತಿಯ ನಿರ್ದೇಶನ ನೀಡಿದರು ಸರ್ಕಾರ ಅದನ್ನು ಪಾಲಿಸಲು ತಯಾರಿದೆ. ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳಲಾಗುತ್ತದೆ. ಪ್ರಕರಣ ಸಂಬಂಧ ಸರಿಯಾದ ಸಮಯ ಬಂದಾಗ ಸರ್ಕಾರ ಈ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಲಿದೆ ಎಂದು ಹೇಳಿದ್ದಾರೆ.
ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಗೆ ಜುಲೈ 30 ರಂದು ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಮಹಾರಾಷ್ಟ್ರದ ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಗಲ್ಲಿಗೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.ಟೈಗರ್ ಮೆಮನ್ ಸಹೋದರನಾದ ಯಾಕೂಬ್ ಮೆಮನ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ತನ್ನ ಅಣ್ಣನ ಭಯೋತ್ಪಾದನೆ ಕೃತ್ಯಗಳಿಗೆ ಸಹಕಾರಿಯಾಗಿದ್ದ ಎಂದು ಪೊಲೀಸರು 1994ರಲ್ಲಿ ಈತನನ್ನು ನೇಪಾಳದ ಕಠ್ಮಂಡುವಿನಲ್ಲಿ ಬಂಧಿಸಿದ್ದರು.