ಭಾರತದ 'ಪತ್ತೇದಾರಿ ಡ್ರೋನ್' ಹೊಡೆದುರುಳಿಸಿದ ಪಾಕ್ ಸೇನೆ
ಭಾರತೀಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಪಾಕಿಸ್ತಾನ ಸೇನೆ ಭಾರತದ ಪತ್ತೇದಾರಿ ಡ್ರೋನ್ ಅನ್ನು ಹೊಡೆದುರುಳಿಸಿದೆ...
ನವದೆಹಲಿ: ಭಾರತೀಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಪಾಕಿಸ್ತಾನ ಸೇನೆ ಭಾರತದ ಪತ್ತೇದಾರಿ ಡ್ರೋನ್ ಅನ್ನು ಹೊಡೆದುರುಳಿಸಿದೆ.
ಪಾಕಿಸ್ತಾನ ಪ್ರಾದೇಶಿಕ ಸಮಗ್ರತೆ ಉಲ್ಲಂಘನೆ ಕಾರಣ ನೀಡಿರುವ ಪಾಕ್ ಸೇನೆ ಭಾರತದ ಪತ್ತೇದಾರಿ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.
ಕಳೆದ ವಾರವಷ್ಟೇ ರಷ್ಯಾದ ಬ್ರಿಕ್ಸ್ ಶೃಂಗಾಸಭೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಕ್ ಪ್ರಧಾನಿ ನವಾಜ್ ಷರೀಫ್ ರನ್ನು ಭೇಟಿ ಉಭಯ ದೇಶಗಳ ನಡುವ ಸಮಸ್ಯೆಗಳ ಪರಿಹಾರ ಸಂಬಂಧ ಮಾತುಕತೆ ನಡೆಸಿದ್ದು ಇದಾದ ಕೆಲ ದಿನಗಳಲ್ಲೇ ಪಾಕ್ ಸೇನೆ ಈ ದುಷ್ಕೃತ್ಯ ಎಸಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.