ಜಮ್ಮು: ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಕಳೆದ 12 ಗಂಟೆಗಳಲ್ಲಿ ಎರಡನೇ ಬಾರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ.
ಪೂಂಚ್ ಸೆಕ್ಟರ್‌ನ ಶಾಹ್‌ಪುರ್ ಕೇರ್ನಿ ಪ್ರದೇಶದಲ್ಲಿ ಭಾರತೀಯ ಸೈನಿಕರ ಮೇಲೆ ಪಾಕ್ ಅಪ್ರಚೋದಿತ ದಾಳಿ ನಡೆಸಿದ ಎಂದು ಅಧಿಕಾರಿ ಹೇಳಿದ್ದಾರೆ.
ಇಂದು ಮಧ್ಯಾಹ್ನ 1.50ರ ಸುಮಾರಿಗೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಲು ಆರಂಭಿಸಿತು. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಗುಂಡಿನ ದಾಳಿ ಮಾಡಿದ್ದಾರೆ.
ಕಳೆದ ರಾತ್ರಿ 9.25ರ ಸುಮಾರಿಗೆ ರಾಜೌರಿ ಜಿಲ್ಲೆಯ ನೌಶೆರಾ ಪ್ರದೇಶದಲ್ಲಿ ಪಾಕ್ ಸೇನಾಪಡೆ ಭಾರತೀಯ ಯೋಧರ ಮೇಲೆ ಅಪ್ರಚೋದಿತ ದಾಳಿ ನಡೆಸಿತ್ತು. ಇಂದು ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ.