ಕುಸಿದು ಬಿದ್ದ ಕಟ್ಟಡ 
ದೇಶ

ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ದೆಹಲಿಯ ಪಶ್ಚಿಮ ಭಾಗದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು 9 ಜನ ಸಾವನ್ನಪ್ಪಿದ್ದು 13 ಜನರಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ...

ನವದೆಹಲಿ : ದೆಹಲಿಯ ಪಶ್ಚಿಮ ಭಾಗದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು 9 ಜನ ಸಾವನ್ನಪ್ಪಿದ್ದು 6 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪಶ್ಚಿಮ ದೆಹಲಿ ಠಾಣಾ ಪೊಲೀಸ್ ಜಂಟಿ ಆಯುಕ್ತ ದೀಪೇಂದ್ರ ಪಾಟಕ್ ತಿಳಿಸಿದ್ದಾರೆ.

ದೆಹಲಿಯ ವಿಷ್ಣು ಗಾರ್ಡನ್‌ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ಅವಶೇಷಗಳ ಅಡಿ ಇನ್ನು 10 ಜನ ಸಿಲುಕಿರುವ ಸಾಧ್ಯತೆಯಿದ್ದು 9 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 8 ಕ್ಕೂ ಹೆಚ್ಚು ಅಗ್ನಿಶಾಮಕದಳದ ತಂಡಗಳು ಮತ್ತು ಎನ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ.

ಈ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಜನವಸತಿ ಪ್ರದೇಶದಲ್ಲೇ ಇಂಥ ಅವಘಡ ಸಂಭವಿಸಿರುವುದು ನಾಗರಿಕರಲ್ಲಿ ಭಯ ಹುಟ್ಟುಹಾಕಿದೆ. ಇದು ಕಾನೂನು ಬಾಹಿರವಾಗಿ ನಿರ್ಮಾಣವಾದ ಕಟ್ಟಡವಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

 ಮೃತರ ಕುಟುಂಬಕ್ಕೆ 2 ಲಕ್ಷ ರು. ಮತ್ತು ಗಾಯಾಳುಗಳಿಗೆ 50 ಸಾವಿರ ಪರಿಹಾರ ಧನವನ್ನು ದೆಹಲಿ ಸರ್ಕಾರ ಘೋಷಣೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ