ನವದೆಹಲಿ: ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗೋದಾವರಿ ಮಹಾಪುಷ್ಕರದಲ್ಲಿ ಉಂಟಾದ ಕಾಲ್ತುಳಿತದ ಬಗ್ಗೆ ಪ್ರತಿಕ್ರಿಯಿಸಿದ್ದು ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಟ್ವಿಟರ್ ನಲ್ಲಿ ಗೋದಾವರಿ ಪುಷ್ಕರದ ಬಗ್ಗೆ ಪ್ರತಿಕ್ರಿಯಿಸಿರುವ ರಾಮ್ ಗೋಪಾಲ್ ವರ್ಮಾ, ತನ್ನ ಭಕ್ತರನ್ನು ದೇವರೇ ರಕ್ಷಣೆ ಮಾಡಲು ಸಾಧ್ಯವಿಲ್ಲದಿದ್ದಾಗ, ಬಡಪಾಯಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಗೆ ರಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಗೋದಾವರಿ ಪುಷ್ಕರದಲ್ಲಿ ನಡೆದ ಕಾಲ್ತುಳಿತಕ್ಕೆ ದೇವರೇ ನೇರ ಹೊಣೆ ಎಂದು ರಾಮ್ ಗೋಪಾಲ್ ವರ್ಮಾ ಆರೋಪಿಸಿದ್ದಾರೆ.