ಸಾಂದರ್ಭಿಕ ಚಿತ್ರ 
ದೇಶ

ರಸ್ತೆ ಅಪಘಾತದಲ್ಲಿ ಪ್ರತಿ ಗಂಟೆಗೆ 16 ಮಂದಿ ದುರ್ಮರಣ: ವರದಿ

ದೇಶದಲ್ಲಿ ಪ್ರತಿ ಗಂಟೆಗೆ ರಸ್ತೆ ಅಪಘಾತದಲ್ಲಿ ಸುಮಾರು 16 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ...

ನವದೆಹಲಿ: ದೇಶದಲ್ಲಿ ಪ್ರತಿ ಗಂಟೆಗೆ ರಸ್ತೆ ಅಪಘಾತದಲ್ಲಿ ಸುಮಾರು 16 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಶೇಕಡ 80 ರಷ್ಟು ಸಾವು ಸಂಚಾರ ನಿಯಮಗಳಿಗೆ ಸಂಬಂಧಿಸಿದ್ದಾಗಿದೆ ಎಂದು ರಾಷ್ಟ್ರೀಯ ಅಪರಾಧಗಳ  ದಾಖಲೆ ಸಂಸ್ಥೆ ತಿಳಿಸಿದೆ.

2014 ರಲ್ಲಿ ಪ್ರತಿ ಗಂಟೆಗೆ 51 ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 16 ಜನ ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಸಂಭವಿಸಿದ 4.5 ಲಕ್ಷ ಅಪಘಾತಗಳಲ್ಲಿ 1,41, 526 ಮಂದಿ ಸಾವನ್ನಪ್ಪಿ, 4,77,731 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಶೇ. 83.7ರಷ್ಟು ಅಪಘಾತಗಳು ಸಂಭವಿಸುತ್ತಿದ್ದೂ. ಅದರಲ್ಲಿ ರಸ್ತೆ ಅಪಘಾತದಿಂದ ಶೇ.14.8 ರಷ್ಟು ಸಾವು ಸಂಭವಿಸುತ್ತಿದೆ. ಇನ್ನು ಶೇ. 1.5 ರಷ್ಟು ಜನ ರೈಲ್ವೆ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.

2013 ರಲ್ಲಿ ಶೇ.2.9 ರಷ್ಟು ಇದ್ದ ಅಪಘಾತ ಪ್ರಮಾಣ 2014 ರಲ್ಲಿ ಮತ್ತಷ್ಟು ಹೆಚ್ಚಿದೆ. ತಮಿಳುನಾಡಿನಲ್ಲಿ 67, 250, ಮಹಾರಾಷ್ಟ್ರದಲ್ಲಿ 44,382, ಕರ್ನಾಟಕದಲ್ಲಿ,43,694, ಮದ್ಯಪ್ರದೇಶದಲ್ಲಿ 39.698 ಮತ್ತು ಕೇರಳದಲ್ಲಿ  35, 872 ಅಪಘಾತ ಕೇಸುಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT