ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಕೆ: ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲು

ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ...

ನವದೆಹಲಿ: ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಮ್ ಆದ್ಮಿ ಪಕ್ಷದ ಜಾಹೀರಾತು ವಿವಾದ ಕುರಿತಂತೆ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸಂದರ್ಶನದ ವೇಳೆ ದೆಹಲಿ ಪೊಲೀಸರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದು, ಪೊಲೀಸರನ್ನು ತುಲ್ಲಾ ಎಂದು ಕರೆದಿದ್ದಾರೆ. ದೆಹಲಿ ತುಲ್ಲಾ (ಪೊಲೀಸ್) ರು ರಸ್ತೆಬದಿಯಲ್ಲಿಯೇ ಭ್ರಷ್ಟಾಚಾರ ನಡೆಸುತ್ತಿರುತ್ತಾರೆ. ಇದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಅಂತಹ ಪೊಲೀಸರ ವಿರುದ್ಧ ನಾವು ದೂರು ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು.

ಈ ಸಂದರ್ಶನದ ವೇಳೆ ಅರವಿಂದ ಕೇಜ್ರಿವಾಲ್ ಅವರು ಪೊಲೀಸರ ವಿರುದ್ಧ ಅವಹೇಳನಕಾರಿ ಪದ ಬಳಸಿರುವುದರ ವಿರುದ್ಧ ದೆಹಲಿ ಪೊಲೀಸರು ಇದೀಗ ಮಾನನಷ್ಟ ಮೊಕದ್ದಮೆ ಮೇರೆಗೆ  ಗೋಬಿಂದ್ ಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೇಜ್ರಿವಾಲ್ ಅವರ ಹೇಳಿಕೆ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಅವರು, ಕೇಜ್ರಿವಾಲ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ರೀತಿಯ ಹೇಳಿಕೆ ನೀಡಿರುವುದು ಸತ್ಯವೇ ಆದರೆ ಇದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌