ರೀಚಾ ಚಡ್ಡಾ 
ದೇಶ

ಸೆಲ್ಫಿಯಿಂದ ಮಹಿಳೆಯರ ಸಮಸ್ಯೆ ಬಗೆ ಹರಿಯುವುದೆ? : ರೀಚಾ ಚಡ್ಡಾ

ಸೆಲ್ಫಿ ತೆಗೆದುಕೊಳ್ಳುವುದರಿಂದ ಮಹಿಳೆಯರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಬಾಲಿವುಡ್ ನಟಿ ರೀಚಾ ಚಡ್ಡಾ ಅಭಿಪ್ರಾಯ ಪಟ್ಟಿದ್ದಾರೆ. ಪ್ರಧಾನಿ ನರೇಂದ್ರ...

ನವದೆಹಲಿ: ಸೆಲ್ಫಿ ತೆಗೆದುಕೊಳ್ಳುವುದರಿಂದ ಮಹಿಳೆಯರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಬಾಲಿವುಡ್ ನಟಿ ರೀಚಾ ಚಡ್ಡಾ ಅಭಿಪ್ರಾಯ ಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿ ವಿತ್ ಡಾಟರ್ ಅಭಿಯಾನವನ್ನು ಉಲ್ಲೇಖಿಸಿ ರೀಚಾ ಈ ರೀತಿ ಹೇಳಿಕೆ ನೀಡಿದ್ದಾರೆ. ಸೆಲ್ಫಿ ವಿತ್ ಡಾಟರ್ ಪ್ರಚಾರ ಚೆನ್ನಾಗಿದೆ. ಆದರೆ ಮಹಿಳೆಯರ ಸಮಸ್ಯೆ ಇದರಿಂದ ಬಗೆ ಹರಿಯುವುದಿಲ್ಲ.

ಸೆಲ್ಫಿ ವಿತ್ ಡಾಟರ್ ನಗರವಾಸಿಗಳಿಗೆ ಸಂಬಂಧಿಸಿದ್ದಾಗಿದೆ. ಸ್ಮಾರ್ಟ್‌ಫೋನ್ ಇರುವವರನ್ನು ಮಾತ್ರ ಗುರಿಯಾಗಿರಿಸಿಕೊಂಡು ಈ ಪ್ರಚಾರ ಕಾರ್ಯಕ್ರಮ ನಡೆಸಲಾಗುತ್ತಿದೆ.  ವರದಕ್ಷಿಣೆ, ಲೈಂಗಿಕ ದೌರ್ಜನ್ಯ, ಮಹಿಳೆಯರನ್ನು ಚುಡಾಯಿಸುವುದು- ಇವುಗಳನ್ನೆಲ್ಲಾ ಸೆಲ್ಫಿ ಕಾರ್ಯಕ್ರಮ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂಬುದು ರಿಚ್ಚಾ ಅವರ ಮಾತು.

ಜುಲೈ 24ರಂದು ತೆರೆ ಕಾಣಲಿರುವ ಮಸಾನ್ ಎಂಬ ಚಿತ್ರದ ಪ್ರಚಾರ ಕಾರ್ಯಕ್ರಮದ ನಡುವೆ ರೀಚಾ ಸೆಲ್ಫಿ ವಿತ್ ಡಾಟರ್ ಅಭಿಯಾನವನ್ನು ಪ್ರಶ್ನಿಸಿ ಈ ರೀತಿಯ ಮಾತುಗಳನ್ನಾಡಿದ್ದಾರೆ. ಅಪ್ಪ ಮತ್ತು ಮಗಳ ಸಂಬಂಧದ ಕಥಾವಸ್ತುವಿರುವ ಚಿತ್ರವಾಗಿದೆ ಮಸಾನ್.  ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಭಾಗವಾಗಿ ಸೆಲ್ಫಿ ವಿತ್ ಡಾಟರ್ ಎಂಬ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!